ಬೆಂಗಳೂರು : ರಾಜ್ಯದ ಶಾಲಾ ಪಠ್ಯಕ್ರಮದಲ್ಲಿ ಕಾರ್ಡಿಯೋ ಪಲ್ಮನರಿ ರೆಸಸಿಟೇಶನ್ (ಸಿಪಿಆರ್ ) ತರಬೇತಿ ವಿಷಯ ಕಡ್ಡಾಯಗೊಳಿಸಲಾಗುತ್ತದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.
ಹೃದಯಾಘಾತದ ಸಂದರ್ಭದಲ್ಲಿ ಜೀವ ಉಳಿಸಲು ಸಿಪಿಆರ್ ಪೂರಕವಾಗಿದ್ದು, ಈ ನಿಟ್ಟಿನಲ್ಲಿ ಶಾಲಾ ಕಾಲೇಜು ವಿದ್ಯಾರ್ಥಿಗಳು ಹಾಗೂ ಸರ್ಕಾರಿ ನೌಕರರಿಗೆ ಕಡ್ಡಾಯವಾಗಿ ಸಿಪಿಆರ್ ತರಬೇತಿ ನೀಡಲು ಸರ್ಕಾರ ನಿರ್ಧರಿಸಿದೆ. ರಾಜ್ಯದಲ್ಲಿ 12 ಪೊಲೀಸ್ ತರಬೇತಿ ಶಾಲೆಗಳಲ್ಲಿ ಸಿಬ್ಬಂದಿಗೆ ಸಿಪಿಆರ್ ತರಬೇತಿ ನೀಡಲಾಗುವುದು ಎಂದು ಹೇಳಿದ್ದಾರೆ.
ಹೃದಯಾಘಾತ ಹಾಗೂ ಅಪಘಾತದಂತಹ ಸಂದರ್ಭದಲ್ಲಿ ತುರ್ತು ವೈದ್ಯಕೀಯ ಸೇವೆ ಮುಖ್ಯವಾಗಿದ್ದು, ಸಕಾಲಕ್ಕೆ ಚಿಕಿತ್ಸೆ ನೀಡಿದ್ರೆ ವ್ಯಕ್ತಿಗಳು ಬದುಕುಳಿಯುವ ಸಾಧ್ಯತೆ ಹೆಚ್ಚು, ಹೀಗಾಗಿ ರಾಜ್ಯದ ಶಾಲಾ ಪಠ್ಯದಲ್ಲಿ ಸಿಪಿಆರ್ ಕಡ್ಡಾಯಗೊಳಿಸಲಾಗುವುದು ಎಂದು ತಿಳಿಸಿದ್ದಾರೆ.