alex Certify BREAKING: ಪಟಾಕಿ ಅಂಗಡಿಯಲ್ಲಿ ಅಗ್ನಿ ಅವಘಡ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಪಟಾಕಿ ಅಂಗಡಿಯಲ್ಲಿ ಅಗ್ನಿ ಅವಘಡ

ಬೆಂಗಳೂರು: ಪಟಾಕಿ ಅನ್ ಲೋಡ್ ಮಾಡುತ್ತಿದ್ದಾಗ ಅವಘಡ ಸಂಭವಿಸಿದ್ದು, ಪಟಾಕಿ ಅಂಗಡಿಗೆ ಬೆಂಕಿ ಬಿದ್ದ ಘಟನೆ ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಅತ್ತಿಬೆಲೆಯಲ್ಲಿ ನಡೆದಿದೆ.

ನವೀನ್ ಎಂಬುವವರಿಗೆ ಸೇರಿದ ಪಟಾಕಿ ಅಂಗಡಿಯಲ್ಲಿ ಈ ಅವಘಡ ಸಂಭವಿಸಿದೆ. ಲಾರಿಯಿಂದ ಪಟಾಕಿ ಅನ್ ಲೋಡ್ ಮಾಡುವಾಗ ಪಟಾಕಿ ಅಂಗಡಿಯಲ್ಲಿ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡಿದ್ದು, ನೋಡ ನೋಡುತ್ತಿದ್ದಂತೆ ಅಂಗಡಿ ಹೊತ್ತಿ ಉರಿದಿದೆ.

ಬೆಂಕಿಯ ಕೆನ್ನಾಲಿಗೆ ಅಕ್ಕಪಕ್ಕದ ಅಂಗಡಿಗಳಿಗೂ ವ್ಯಾಪಿಸಿದ್ದು, 4-5 ಅಂಗಡಿಗಳು ಸುಟ್ಟು ಭಸ್ಮವಾಗಿವೆ. ಮುಗಿಲೆತ್ತರಕ್ಕೆ ದಟ್ಟ ಹೊಗೆ ಆವರಿಸಿದೆ.

ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಬೆಂಕಿ ಅವಘಡಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ. ಅಪಾರ ಪ್ರಮಾಣದ ಪಟಾಕಿ, ಅಕ್ಕಪಕ್ಕದ ಅಂಗಡಿಗಳು ಬೆಂಕಿಗಾಹುತಿಯಾಗಿವೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...