ಬೆಂಗಳೂರು: ರಾಜ್ಯದ ವಿವಿಧೆಡೆ ಪಟಾಕಿ ಮಳಿಗೆಗಳ ಮೇಲೆ ಅಧಿಕಾರಿಗಳು, ಪೊಲೀಸರು ದಾಳಿ ನಡೆಸಿದ್ದಾರೆ. ಹಸಿರು ಪಟಾಕಿಗೆ ಮಾತ್ರ ಅವಕಾಶ ನೀಡಿದ್ದರೂ ಕೂಡ ನಿಷೇಧಿತ ಪಟಾಕಿಗಳ ಮಾರಾಟ ಅವ್ಯಾಹತವಾಗಿ ನಡೆದಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರು, ಮೈಸೂರು, ದಾವಣಗೆರೆ ಸೇರಿದಂತೆ ಹಲವೆಡೆ ಅಧಿಕಾರಿಗಳು ಹಾಗೂ ಪೊಲೀಸರು ಪಟಾಕಿ ಮಳಿಗೆಗಳ ಮೇಲೆ ದಾಳಿ ಮಾಡಿ ನಿಷೇಧಿತ ಪಟಾಕಿಗಳನ್ನು ವಶಕ್ಕೆ ಪಡೆದಿದ್ದಾರೆ.
ದಾಳಿಯ ವೇಳೆ ಪಟಾಕಿ ವ್ಯಾಪಾರಿಗಳು ಮತ್ತು ಅಧಿಕಾರಿಗಳ ನಡುವೆ ಮಾತಿನ ಚಕಮಕಿ ನಡೆದಿದೆ. ಇನ್ನು ನಿಯಮ ಪಾಲಿಸದ ಮತ್ತು ನಿಷೇಧಿತ ಪಟಾಕಿ ಮಾರಾಟ ಮಾಡಿದ ಕಾರಣಕ್ಕೆ ಹಲವು ವ್ಯಾಪಾರಸ್ಥರ ವಿರುದ್ಧ ಕ್ರಮಕೈಗೊಳ್ಳಲಾಗಿದೆ ಎನ್ನಲಾಗಿದೆ.