ಮಂಗಳೂರು: ಪಟಾಕಿ ಗೋದಾಮಿನಲ್ಲಿ ಸ್ಪೋಟ ಸಂಭವಿಸಿ ಇಬ್ಬರು ಸಾವನ್ನಪ್ಪಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ವೇಣೂರಿನಲ್ಲಿ ನಡೆದಿದೆ.
ವೇಣೂರಿನ ಕುಕ್ಕೇಡಿ ಗ್ರಾಮದ ಕಟ್ಯಾರು ಬಳಿ ಬಶೀರ್ ಎಂಬುವರಿಗೆ ಸೇರಿದ ಸಾಲಿಡ್ ಫೈರ್ ವರ್ಕ್ಸ್ ಪಟಾಕಿ ಗೋದಾಮಿನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು ಇಬ್ಬರು ಸಾವನ್ನಪ್ಪಿದ್ದಾರೆ.
55 ವರ್ಷದ ಸ್ವಾಮಿ ಹಾಗೂ ಮತ್ತೊಬ್ಬ ಕಾರ್ಮಿಕರು ಮೃತಪಟ್ಟಿದ್ದಾರೆ. ಸ್ಥಳಕ್ಕೆ ಪೊಲೀಸರು, ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿದ್ದಾರೆ ಎನ್ನಲಾಗಿದ್ದು, ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.