alex Certify ಪಟಾಕಿಗೆ ‘ಹಸಿರು’ ನಿಶಾನೆ: ಮಾರ್ಗಸೂಚಿ ಉಲ್ಲಂಘಿಸಿದ್ರೆ ಕ್ರಮ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪಟಾಕಿಗೆ ‘ಹಸಿರು’ ನಿಶಾನೆ: ಮಾರ್ಗಸೂಚಿ ಉಲ್ಲಂಘಿಸಿದ್ರೆ ಕ್ರಮ

ಬೆಂಗಳೂರು: ರಾಜ್ಯ ಸರ್ಕಾರದ ವತಿಯಿಂದ ಹಸಿರು ಪಟಾಕಿ ಮಾರಾಟ ಮತ್ತು ಬಳಕೆಗೆ ಮಾತ್ರ ಅವಕಾಶ ಕಲ್ಪಿಸಿದ್ದು, ಆದೇಶವನ್ನು ಕಟ್ಟು ನಿಟ್ಟಾಗಿ ಜಾರಿಗೆ ತರಲು ಹೈಕೋರ್ಟ್ ನಿರ್ದೇಶನ ನೀಡಿದೆ.

ಹಸಿರು ಪಟಾಕಿ ಸಂಬಂಧವಾಗಿ ರಾಜ್ಯ ಉಚ್ಚ ನ್ಯಾಯಾಲಯದಲ್ಲಿ ದಾಖಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ರಿಟ್ ಅರ್ಜಿಯ ಬಗ್ಗೆ ರಾಜ್ಯ ಉಚ್ಚ ನ್ಯಾಯಾಲಯವು ನ.13 ರಂದು ಕೆಳಕಂಡಂತೆ ನಿರ್ದೇಶನಗಳನ್ನು ನೀಡಿದೆ.

ರಾಜ್ಯ ನಗರ ಪಾಲಿಕೆಗಳು(ಸ್ಥಳೀಯ ಸಂಸ್ಥೆಗಳು) ಮತ್ತು ಪೊಲೀಸ್ ಇಲಾಖೆಯು ಸಂಬಂಧಪಟ್ಟ ಪ್ರಾಧಿಕಾರಗಳು ಸರ್ಕಾರದ ಆದೇಶ ದಿನಾಂಕ: 06-11-2020 , 10-11-2020 ಮತ್ತು 12-11-2020 ನ್ನು ಕಡ್ಡಾಯವಾಗಿ ಜಾರಿಗೊಳಿಸುವುದು.

ಪಟಾಕಿ ಮಾರಾಟಗಾರರ ಅಂಗಡಿಗಳಿಗೆ ಭೇಟಿ ನೀಡಿ ಸಿಎಸ್‍ಐಆರ್ ಮತ್ತು ಎನ್‍ಇಇಆರ್‍ಐ ಪ್ರಮಾಣೀಕೃತ ಹಸಿರು ಪಟಾಕಿಗಳನ್ನು ಮಾತ್ರ ಮಾಡುತ್ತಿರುವ ಬಗ್ಗೆ ಖಾತ್ರಿಪಡಿಸಿಕೊಳ್ಳತಕ್ಕದ್ದು.

ಪೊಲೀಸ್ ಮತ್ತು ಮಾಲಿನ್ಯ ನಿಯಂತ್ರಣ ಮಂಡಳಿಯು ಶಬ್ದ ಮಾಲಿನ್ಯವನ್ನು ತಡೆಗಟ್ಟಲು ಮತ್ತು ಯಾವುದೇ ಕಾರಣಕ್ಕೂ ನಿಯಮದ ವ್ಯಾಪ್ತಿ ಮೀರಿ ಪಟಾಕಿಗಳ ಶಬ್ದ ಹೆಚ್ಚಾಗಿ ಹೊಮ್ಮದಂತೆ ಕ್ರಮವಹಿಸಿ ಇದನ್ನು ಉಲ್ಲಂಘಿಸಿದವರ ವಿರುದ್ದ ಕಟ್ಟುನಿಟ್ಟಿನ ಕ್ರಮ ವಹಿಸತಕ್ಕದ್ದು.

ಯಾವುದೇ ಕಾರಣಕ್ಕೂ ಅನುಷ್ಟಾನ ಪ್ರಾಧಿಕಾರಗಳು ನಿಯಮ ಉಲ್ಲಂಘಿಸುವವರಿಗೆ ಸಹಾನುಭೂತಿ ತೋರಿಸತಕ್ಕದ್ದಲ್ಲ.

ರಾಷ್ಟ್ರೀಯ ಹಸಿರು ನ್ಯಾಯಾಧಿಕರಣದ ದಿ: 09-11-2020 ರ ಆದೇಶವನ್ನು ಕಡ್ಡಾಯವಾಗಿ ಜಾರಿಗೊಳಿಸತಕ್ಕದ್ದು. ಇಲಾಖಾ ಮುಖ್ಯಸ್ಥರು ಮತ್ತು ಪ್ರಾಧಿಕಾರಗಳು ಸಾಮಾಜಿಕ ಜಾಲತಾಣ ಮತ್ತು ಇತರೆ ಮಾಧ್ಯಮಗಳ ಮುಖಾಂತರ ಸಾರ್ವಜನಿಕರು ಕಡ್ಡಾಯವಾಗಿ ದಿ: 12-11-2020 ರ ಸರ್ಕಾರದ ವಿವರಣೆಯಲ್ಲಿರುವಂತೆ ಹಸಿರು ಪಟಾಕಿಗಳನ್ನು ಮಾತ್ರ ಹಚ್ಚಲು ಎಚ್ಚರಿಕೆ ನೀಡಲು ವ್ಯಾಪಕ ಪ್ರಚಾರ ಮಾಡುವುದು.

ವಿಪತ್ತು ನಿರ್ವಹಣಾ ಅಧಿನಿಯಮ 2005 ರಡಿಯಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ 2020ನೇ ನವೆಂಬರ್ 14 ರಿಂದ 16 ರವರೆಗೆ ಆಚರಿಸಲಾಗುವ ದೀಪಾವಳಿ ಹಬ್ಬದ ಸಂಬಂಧವಾಗಿ ಸರ್ಕಾರದ ಆದೇಶ ದಿನಾಂಕ: 06-11-2020 , 10-11-2020 ಮತ್ತು 12-11-2020 ರಲ್ಲಿ ನೀಡಿರುವ ಆದೇಶವನ್ನು ಮತ್ತು ಮಾರ್ಗಸೂಚಿಗಳನ್ನು ಅಂಶವಾರು ಜಿಲ್ಲೆಯಲ್ಲಿ ಯಥಾವತ್ತಾಗಿ ಜಾರಿಗೊಳಿಸುವತ್ತ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಕಾಧಿಕಾರಿಗಳು, ಸ್ಥಳೀಯ ಸಂಸ್ಥೆಯ ಮುಖ್ಯಸ್ಥರು ಹಾಗೂ ಇತರೆ ಇಲಾಖೆಗಳು/ಪ್ರಾಧಿಕಾರಗಳು ಹಾಗೂ ತಾಲ್ಲೂಕು ಮಟ್ಟದ ಸಮಿತಿಗಳು ಪರಿಣಾಮಕಾರಿಯಾಗಿ ಅನುಷ್ಟಾನಗೊಳಿಸುವುದು ಮತ್ತು ಕಡ್ಡಾಯವಾಗಿ ಪಾಲಿಸುವುದು.

ಅನುಷ್ಟಾನಗೊಳಿಸಿದ ಬಗ್ಗೆ ಸಂಬಂಧಪಟ್ಟ ಎಲ್ಲಾ ಪ್ರಾಧಿಕಾರಗಳು ದಿನಾಂಕ: 18-11-2020 ರ ಸಂಜೆ 5 ಗಂಟೆಯೊಳಗೆ ವರದಿ ಸಲ್ಲಿಸತಕ್ಕದ್ದು. ರಾಷ್ಟ್ರೀಯ ನಿರ್ದೇಶನಗಳನ್ನು ಹಾಗೂ ಸರ್ಕಾರದ ಆದೇಶ/ಮಾರ್ಗಸೂಚಿಗಳನ್ನು ಉಲ್ಲಂಘಿಸುವವರ ವಿರುದ್ದ ವಿಪತ್ತು ನಿರ್ವಹಣಾ ಅಧಿನಿಯಮ 2005 ಹಾಗೂ ಭಾರತೀಯ ದಂಡ ಸಂಹಿತೆ ಸೆಕ್ಷನ್ 188ರ ಅಡಿಯಲ್ಲಿ ಶಿಸ್ತಿನ/ಕಾನೂನು ಕ್ರಮ ಮತ್ತು ಅನ್ವಯವಾಗಬಹುದಾದ ಇತರೆ ಕಾನೂನು ಉಪಬಂಧಗಳ ಮೇರೆಗೆ ಕ್ರಮ ಜರುಗಿಸಲಾಗುವುದು ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...