ಬೆಂಗಳೂರು: ಸುಪ್ರೀಂಕೋರ್ಟ್ ನಿರ್ದೇಶನದಂತೆ ರಾಜ್ಯದಲ್ಲಿ ಹಸಿರು ಪಟಾಕಿ ಹೊರತಾಗಿ ಬೇರೆ ರೀತಿಯ ಪಟಾಕಿಗಳನ್ನು ಮಾರಾಟ ಮಾಡದಂತೆ ಮತ್ತು ಸಿಡಿಸಿದಂತೆ ರಾಜ್ಯಸರ್ಕಾರ ಆದೇಶ ಹೊರಡಿಸಿದೆ. ಇದರೊಂದಿಗೆ ನಿರ್ಬಂಧಗಳನ್ನು ಕೂಡ ಪ್ರಕಟಿಸಲಾಗಿದೆ.
ಸಂಬಂಧಿಸಿದ ಇಲಾಖೆ ಮತ್ತು ಪ್ರಾಧಿಕಾರಗಳಿಂದ ಅಧಿಕೃತ ಪರವಾನಿಗೆ ಪಡೆದ ಮಾರಾಟಗಾರರು ಹಸಿರು ಪಟಾಕಿಯನ್ನು ಮಾತ್ರ ಮಾರಾಟ ಮಾಡಬೇಕು. ನವೆಂಬರ್ 1 ರಿಂದ 10 ರವರೆಗೆ ಹಸಿರು ಪಟಾಕಿ ಮಾರಾಟ ಮಳಿಗೆಗಳನ್ನು ತೆರೆಯಬೇಕು. ಬೇರೆ ಸ್ಥಳದಲ್ಲಿ ಮತ್ತು ದಿನಾಂಕದಲ್ಲಿ ಅಂಗಡಿಯನ್ನು ತೆಗೆಯಬಾರದು.
ಹಸಿರು ಪಟಾಕಿ ಮಾರಾಟ ಮಳಿಗೆಗಳ ಬಳಿಗೆ ಬರುವ ಸಾರ್ವಜನಿಕರಿಗೆ ಥರ್ಮಲ್ ಸ್ಕ್ರೀನಿಂಗ್, ಸ್ಯಾನಿಟೈಸರ್ ವ್ಯವಸ್ಥೆ ಮಾಡಬೇಕು. ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು ಎಂದು ತಿಳಿಸಲಾಗಿದೆ.