ಬೆಂಗಳೂರು: ದೀಪಾವಳಿ ಹಬ್ಬದ ಸಂದರ್ಭದಲ್ಲಿ ರಾತ್ರಿ 8 ರಿಂದ 10 ಗಂಟೆಯವರೆಗೆ ಪಟಾಕಿ ಸಿಡಿಸಲು ಅವಕಾಶ ನೀಡಲಾಗಿದೆ.
ಹಸಿರು ಪಟಾಕಿಗಳನ್ನು ಮಾತ್ರ ಮಾರಾಟ ಮತ್ತು ಬಳಕೆ ಮಾಡಲು ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಆದೇಶ ಹೊರಡಿಸಿದೆ. ನವೆಂಬರ್ ನಲ್ಲಿ ದೀಪಾವಳಿ ಹಬ್ಬ ಆಚರಿಸಲಿದ್ದು, ಪಟಾಕಿ ಸಿಡಿಸುವುದರಿಂದ ಉಂಟಾಗುವ ಪರಿಸರ ಮಾಲಿನ್ಯ, ಜನರ ಆರೋಗ್ಯ ಗಮನದಲ್ಲಿಟ್ಟುಕೊಂಡು ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಹಸಿರು ಪಟಾಕಿಗಳ ಬಳಕೆಗೆ ಆದೇಶಿಸಿದೆ.
ಸುಪ್ರೀಂಕೋರ್ಟ್ ಆದೇಶದಂತೆ ರಾತ್ರಿ 8 ಗಂಟೆಯಿಂದ 10 ಗಂಟೆಯವರೆಗೆ ಮಾತ್ರ ಪಟಾಕಿ ಸಿಡಿಸಲು ಅವಕಾಶವಿದ್ದು, ಬೇರೆ ಅವಧಿಯಲ್ಲಿ ಪಟಾಕಿ ಸಿಡಿಸಬಾರದು. ರಾಜ್ಯ ಅತ್ಯಂತ ಕಟ್ಟುನಿಟ್ಟಾಗಿ ಈ ಆದೇಶ ಜಾರಿಗೆ ಎಲ್ಲ ಸಂಬಂಧಿಸಿದ ಇಲಾಖೆ ಅಧಿಕಾರಿಗಳು ಕ್ರಮ ಕೈಗೊಳ್ಳುವಂತೆ ತಿಳಿಸಲಾಗಿದೆ.