ಬೆಂಗಳೂರು: ಗ್ರಾಮ ಪಂಚಾಯಿತಿಗಳಿಗೆ ಹೆಚ್ಚಿನ ಸಂಪನ್ಮೂಲ ಕ್ರೋಢೀಕರಣಕ್ಕೆ ಚಿಂತನೆ ನಡೆದಿದೆ. ಗ್ರಾಮ ಪಂಚಾಯಿತಿ ಆಸ್ತಿಗಳ ನಕ್ಷೆ ರೂಪಿಸಲು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ ನೀಡಿದ್ದಾರೆ.
ಗ್ರಾಮ ಪಂಚಾಯಿತಿಗಳಿಗೆ ಸ್ವತಂತ್ರ ಆಡಳಿತಕ್ಕಾಗಿ ಆರ್ಥಿಕ ಶಕ್ತಿ ತುಂಬವ ಗುರಿ ಹೊಂದಲಾಗಿದೆ. ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಬರುವ ಆಸ್ತಿಗಳ ನಕ್ಷೆ ರೂಪಿಸಲು ಸೂಚನೆ ನೀಡಲಾಗಿದ್ದು, ಯೋಜನೆ ಸಾಕಾರಗೊಳಿಸುವಲ್ಲಿ ಕಾರ್ಯತತ್ಪರರಾಗಲು ತಿಳಿಸಿದ್ದಾರೆ.
ಪ್ರಾಯೋಗಿಕವಾಗಿ ಕೆಲವು ಗ್ರಾಮ ಪಂಚಾಯಿತಿಗಳ ಜೊತೆಗೆ ತಾಪಂ, ಜಿಪಂಗಳನ್ನು ಆರಿಸಿಕೊಳ್ಳಲು ಸೂಚನೆ ನೀಡಲಾಗಿದೆ. ಪ್ರವಾಸಿ ಕೇಂದ್ರಗಳ ಪ್ರಮುಖ ಆಸ್ತಿಗಳನ್ನು ವಾಣಿಜ್ಯಾತ್ಮಕವಾಗಿ ಬಳಕೆ ಮಾಡಿಕೊಳ್ಳಲು ಈ ಮೂಲಕ ಸ್ಥಳೀಯ ಆಡಳಿತಗಳ ಆರ್ಥಿಕ ಸ್ಥಿತಿ ಸುಧಾರಣೆಗೆ ಕ್ರಮ ಕೈಗೊಳ್ಳಲಾಗಿದೆ.
ಪಂಚಾಯತ್‌ಗಳಿಗೆ ಆರ್ಥಿಕ ಸ್ವಾತಂತ್ರ್ಯವನ್ನು ಸಾಧಿಸಲು ಹೆಚ್ಚುವರಿ ಆದಾಯ ಮೂಲಗಳನ್ನು ಸೃಷ್ಟಿಸಲು ಇಲಾಖೆ ಪ್ರಯತ್ನಿಸುತ್ತಿದೆ. ಪೈಲಟ್ ಯೋಜನೆಗಾಗಿ ಪಂಚಾಯತ್ ಸ್ವತ್ತುಗಳನ್ನು ಮ್ಯಾಪಿಂಗ್ ಮತ್ತು ಹಣಗಳಿಸುವ ಕುರಿತು ನಾವು ವಿವರವಾದ ಚರ್ಚೆಯನ್ನು ನಡೆಸಿದ್ದೇವೆ. ಆಗಸ್ಟ್ ಅಂತ್ಯದ ವೇಳೆಗೆ, ನಾವು ರಾಜ್ಯಾದ್ಯಂತ ಪ್ರಾಯೋಗಿಕ ಯೋಜನೆ ಜಾರಿಗೊಳಿಸುತ್ತೇವೆ ಎಂದು ಸಚಿವರು ತಿಳಿಸಿದ್ದಾರೆ.