ಬೆಂಗಳೂರು : ರಾಜ್ಯದ ದೇವಾಲಯಗಳ ಅಭಿವೃದ್ಧಿಗೆ ಪ್ರಾಧಿಕಾರ ರಚನೆ ಮಾಡುವುದಾಗಿ ಸಚಿವ ರಾಮಲಿಂಗಾ ರೆಡ್ಡಿ ಘೋಷಣೆ ಮಾಡಿದ್ದಾರೆ.
ಇಂದು ವಿಧಾನಸಭೆಯಲ್ಲಿ ಘಾಟಿ ಸುಬ್ರಮಣ್ಯ ದೇವಾಲಯದ ಅಭಿವೃದ್ದಿಯ ಬಗ್ಗೆ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಸಚಿವರು ಘಾಟಿ ಸುಬ್ರಮಣ್ಯ ದೇವಾಲಯದ ಅಭಿವೃದ್ದಿಗೆ ಕ್ರಮ ವಹಿಸಲಾಗುತ್ತದೆ, ಪಾರ್ಕಿಂಗ್ ಗೆ ಅಗತ್ಯ ಸ್ಥಳ ಗುರುತಿಸಲಾಗಿದೆ ಎಂದರು.
ಹೆಚ್ಚು ಭಕ್ತರು ಬರುವ ಎಲ್ಲಾ ದೇವಾಲಯಗಳಿಗೆ ವಿಶೇಷ ಪ್ರಾಧಿಕಾರ ರಚನೆ ಮಾಡಲು ಸರ್ಕಾರ ನಿರ್ಧರಿಸಿದೆ. ಈ ವಿಚಾರ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಪ್ರಸ್ತಾಪ ಮಾಡಲಾಗುತ್ತದೆ, ಕ್ಯಾಬಿನೆಟ್ ನಲ್ಲಿ ಪ್ರಾಧಿಕಾರ ರಚನೆಗೆ ಒಪ್ಪಿಗೆ ಕೊಡುತ್ತೇವೆ ಎಂದರು.