ಬೆಂಗಳೂರು: ಬೆಂಗಳೂರು ನಗರ ಜಿಲ್ಲೆ ಆನೇಕಲ್ ತಾಲೂಕಿನ ಇಗ್ಗಲೂರು ಗ್ರಾಮದ ಬಳಿ ಕೃಷಿ ಹೊಂಡಕ್ಕೆ ಬಿದ್ದು ಇಬ್ಬರು ಬಾಲಕರು ಸೇರಿ ಮೂವರು ಸಾವನ್ನಪ್ಪಿದ್ದಾರೆ.
ಕೃಷಿ ಹೊಂಡಕ್ಕೆ ಬಿದ್ದ ಬಾಲ್ ತರಲು ಹೋಗಿ ದುರ್ಘಟನೆ ಸಂಭವಿಸಿದೆ. ಬಾಲ್ ತರುವಾಗ ಆಯತಪ್ಪಿ ಹೊಂಡಕ್ಕೆ ಬಿದ್ದ ಒಬ್ಬ ಬಾಲಕನನ್ನು ರಕ್ಷಿಸಲು ಹೋಗಿ ಮೂವರು ಸಾವನ್ನಪ್ಪಿದ್ದಾರೆ.
ಅಮಿತ್ ಕುಮಾರ್(31), ಧೀಮಂತ್(13), ಹೃಷಿಕೇಶ್(9) ಮೃತಪಟ್ಟವರು ಎಂದು ಹೇಳಲಾಗಿದೆ. ಮಜುಂದಾರ್ ಆಸ್ಪತ್ರೆಗೆ ಮೃತದೇಹಗಳನ್ನು ಸ್ಥಳಾಂತರಿಸಲಾಗಿದೆ. ಸೂರ್ಯನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.