ಕ್ರಿಕೆಟ್ ಬೆಟ್ಟಿಂಗ್ ನಡೆಸುತ್ತಿದ್ದ ಇಬ್ಬರು ಅರೆಸ್ಟ್

ಮಂಗಳೂರು: ಕ್ರಿಕೆಟ್ ಬೆಟ್ಟಿಂಗ್ ದಂಧೆ ನಡೆಸುತ್ತಿದ್ದ ಇಬ್ಬರನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಸುರತ್ಕಲ್ ಮತ್ತು ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕ್ರಿಕೆಟ್ ಬೆಟ್ಟಿಂಗ್ ನಡೆಸುತ್ತಿದ್ದ  ದೀಪಕ್(33), ಸಂದೀಪ್ ಶೆಟ್ಟಿ(38) ಬಂಧಿತ ಆರೋಪಿಗಳು.

ಮೊಬೈಲ್ ಫೋನ್ ಮೂಲಕ ಬೆಟ್ಟಿಂಗ್ ಆಪ್ ಬಳಸಿಕೊಂಡು ವಿಶ್ವಕಪ್ ಕ್ರಿಕೆಟ್ ಪಂದ್ಯಗಳ ಸೋಲು ಗೆಲುವಿನಲ್ಲಿ ಕ್ರಿಕೆಟ್ ಬೆಟ್ಟಿಂಗ್ ಜೂಜಾಟ ನಡೆಸುತ್ತಿದ್ದ ಇವರು ಸಾರ್ವಜನಿಕರಿಂದ ಹಣ ಸಂಗ್ರಹಿಸಿ ದಂಧೆಯಲ್ಲಿ ನಿರತರಾಗಿದ್ದರು. ಮಂಗಳೂರು ಸಿಸಿಬಿ ಪೊಲೀಸರು ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿ ಇಬ್ಬರನ್ನು ಬಂಧಿಸಿದ್ದಾರೆ. 31 ಸಾವಿರ ರೂ. ನಗದು, 4 ಮೊಬೈಲ್ ವಶಕ್ಕೆ ಪಡೆಯಲಾಗಿದೆ. ಸುರತ್ಕಲ್ ಮತ್ತು ಕಾವೂರು ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ಪ್ರಕರಣ ದಾಖಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read