alex Certify ಮಂಗಳೂರು ಪೊಲೀಸರ ಕಾರ್ಯಾಚರಣೆ: ಕ್ರಿಕೆಟ್ ಬೆಟ್ಟಿಂಗ್ ದಂಧೆ ನಡೆಸುತ್ತಿದ್ದ 6 ಮಂದಿ ಅರೆಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಂಗಳೂರು ಪೊಲೀಸರ ಕಾರ್ಯಾಚರಣೆ: ಕ್ರಿಕೆಟ್ ಬೆಟ್ಟಿಂಗ್ ದಂಧೆ ನಡೆಸುತ್ತಿದ್ದ 6 ಮಂದಿ ಅರೆಸ್ಟ್

ಮಂಗಳೂರು: ಕ್ರಿಕೆಟ್ ಬೆಟ್ಟಿಂಗ್ ವಿರುದ್ಧ ಮಂಗಳೂರು ಪೊಲೀಸರು ಕಾರ್ಯಾಚರಣೆ ತೀವ್ರಗೊಳಿಸಿದ್ದಾರೆ. ವಿವಿಧೆಡೆ ದಾಳಿ ಮಾಡಿ 6 ಮಂದಿಯನ್ನು ಬಂಧಿಸಿದ್ದಾರೆ.

ಬಜಪೆ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ನಾಲ್ವರನ್ನು ಬಂಧಿಸಲಾಗಿದೆ. ಜಯಂತ ಪೂಜಾರಿ(41), ದೇವದಾಸ ಪೂಜಾರಿ(34), ರಮೇಶ ಪೂಜಾರಿ(48) ಬಂಧಿತ ಆರೋಪಿಗಳಾಗಿದ್ದಾರೆ. ಬಂಧಿತರಿಂದ ಮೂರು ಮೊಬೈಲ್ ಫೋನ್, 4500 ರೂ. ವಶಕ್ಕೆ ಪಡೆಯಲಾಗಿದೆ. ಆರೋಪಿಗಳು ಆನ್ಲೈನ್ ಮೂಲಕ ಕ್ರಿಕೆಟ್ ಬೆಟ್ಟಿಂಗ್ ದಂಧೆಯಲ್ಲಿ ತೊಡಗಿರುವ ಮಾಹಿತಿ ಪಡೆದ ಬಜಪೆ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ.

ಮತ್ತೊಂದು ಪ್ರಕರಣದಲ್ಲಿ ಆನ್ಲೈನ್ ಮೂಲಕ ಕ್ರಿಕೇಟ್ ಬೆಟ್ಟಿಂಗ್ ದಂಧೆ ನಡೆಸುತ್ತಿದ್ದ ಪ್ರವೀಣ್ ಎಂಬುವನನ್ನು ಬಂಧಿಸಲಾಗಿದೆ. ಮತ್ತೊಬ್ಬ ಆರೋಪಿ ಧನು ಪರಾರಿಯಾಗಿದ್ದು, ಆತನ ಬಂಧನಕ್ಕೆ ಬಲೆ ಬೀಸಲಾಗಿದೆ. ಬಂದಿತನಿಂದ ಒಂದು ಮೊಬೈಲ್ ಫೋನ್ ವಶಕ್ಕೆ ಪಡೆಯಲಾಗಿದೆ. ಬಜಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮುಲ್ಕಿ ಪೋಲಿಸ್ ಠಾಣೆ ವ್ಯಾಪ್ತಿಯ ಹಳೆಯ ಅಂಗಡಿಯಲ್ಲಿ ಸಾರ್ವಜನಿಕರಿಂದ ಹಣ ಸಂಗ್ರಹಿಸಿ ಕ್ರಿಕೆಟ್ ಬೆಟ್ಟಿಂಗ್ ದಂಧೆ ನಡೆಸುತ್ತಿದ್ದ ಇಂದ್ರೇಶ್(28) ಎಂಬವನನ್ನು ಬಂಧಿಸಿ ಮೊಬೈಲ್ ಫೋನ್ 2400 ರೂ. ವಶಕ್ಕೆ ಪಡೆಯಲಾಗಿದೆ.

ಕಾರ್ನಾಡು ಬಳಿ ಕ್ರಿಕೆಟ್ ಬೆಟ್ಟಿಂಗ್ ದಂಧೆ ನಡೆಸುತ್ತಿದ್ದ ಕಲ್ಲಪ್ಪ ಭಜಂತ್ರಿ(52) ಎಂಬುವನ ಬಂಧಿಸಿದ್ದು, ಮೊಬೈಲ್ ಹಾಗೂ 2100 ರೂ. ವಶಕ್ಕೆ ಪಡೆದು ಮುಲ್ಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...