ಬೆಂಗಳೂರು : ಬೆಂಗಳೂರಲ್ಲಿ ಮತ್ತೆ ಕ್ರಿಕೆಟ್ ಬೆಟ್ಟಿಂಗ್ ದಂಧೆ ತಲೆ ಎತ್ತಿದ್ದು, ಒಟ್ಟು 13 ಮಂದಿಯನ್ನು ಬಂಧಿಸಲಾಗಿದೆ.
ಈ ಬಗ್ಗೆ ಮಾಹಿತಿ ನೀಡಿದ ನಗರ ಪೊಲೀಸ್ ಆಯುಕ್ತ ದಯಾನಂದ್ ಬೆಂಗಳೂರಿನ ವಿವಿಧೆಡೆ 11 ಕಡೆ ದಾಳಿ ನಡೆಸಿ ಕ್ರಿಕೆಟ್ ಬೆಟ್ಟಿಂಗ್ ದಂಧೆ ನಡೆಸುತ್ತಿದ್ದ 13 ಮಂದಿಯನ್ನು ಬಂಧಿಸಲಾಗಿದೆ. ಹಾಗೂ ಬಂಧಿತ ಆರೋಪಿಗಳಿಂದ ಸುಮಾರು 10 ಲಕ್ಷ ನಗದು ವಶಕ್ಕೆ ಪಡೆಯಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ದಯಾನಂದ್ ಹೇಳಿದ್ದಾರೆ.