ಬೆಂಗಳೂರು: ಅಪರಾಧ ಕೃತ್ಯಗಳ ತನಿಖೆಯ ಸ್ಥಳ ಪರಿಶೀಲನಾ ಅಧಿಕಾರಿ ಹುದ್ದೆಯನ್ನು ಸೃಷ್ಟಿಸಲಾಗಿದೆ. ಗೃಹ ಇಲಾಖೆಯಲ್ಲಿ ರಾಜ್ಯ ಸರ್ಕಾರದ ವತಿಯಿಂದ ಹೊಸ ಹುದ್ದೆಯನ್ನು ಸೃಷ್ಟಿಸಲಾಗಿದ್ದು, ದೇಶದಲ್ಲೇ ಮೊದಲ ಬಾರಿಗೆ ರಾಜ್ಯದಲ್ಲಿ ಇಂತಹುದೊಂದು ಸೃಷ್ಟಿಸಲಾಗಿದೆ. ಅಪರಾಧ ಕೃತ್ಯ ತನಿಖೆಗೆ ಹೊಸ ಪೊಲೀಸ್ ಹುದ್ದೆ ಸೃಷ್ಟಿಸಲಾಗಿದೆ.
ಅಪರಾಧ ಕೃತ್ಯ ನಡೆದ ಸ್ಥಳವನ್ನು ವೈಜ್ಞಾನಿಕವಾಗಿ ಪರಿಶೀಲನೆ ನಡೆಸಿ ಸೂಕ್ಷ್ಮಾತಿಸೂಕ್ಷ್ಮ ಸಾಕ್ಷಾಧಾರಗಳನ್ನು ಸಂಗ್ರಹಿಸಲು ಪೊಲೀಸ್ ಇಲಾಖೆಯಲ್ಲಿ ಹುದ್ದೆ ಸೃಷ್ಟಿ ಮಾಡಲಾಗಿದೆ.
ನಾಳೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಸೀನ್ ಆಫ್ ಕ್ರೈಂ ಆಫೀಸರ್ ಹುದ್ದೆಗಳ ಆದೇಶ ಪ್ರತಿಯನ್ನು ಡಿಜಿ ಐಜಿಪಿಗೆ ಹಸ್ತಾಂತರ ಮಾಡಲಿದ್ದಾರೆ. ಅಪರಾಧ ಕೃತ್ಯಗಳು ನಡೆದ ತಕ್ಷಣ ಸ್ಥಳಕ್ಕೆ ತೆರಳಿ ಅಲ್ಲಿರುವ ಸಾಕ್ಷಾಧಾರಗಳನ್ನು ವೈಜ್ಞಾನಿಕವಾಗಿ ಹಾಗೂ ಸುರಕ್ಷಿತವಾಗಿ ಸಂರಕ್ಷಿಸಲು ವಿಶೇಷಾಧಿಕಾರಿಗಳ ನೇಮಕ ಮಾಡಲಾಗುವುದು. ಇದುವರೆಗೆ ಸ್ಥಳೀಯ ಪೊಲೀಸ್ ಅಧಿಕಾರಿಗಳು ಈ ಕೆಲಸ ಮಾಡುತ್ತಿದ್ದರು. ಪ್ರಥಮ ಹಂತದಲ್ಲಿ 206 ನುರಿತ ಅಧಿಕಾರಿಗಳನ್ನು ನೇಮಕ ಮಾಡಲಾಗುವುದು ಎನ್ನಲಾಗಿದೆ.