ಶಿವಮೊಗ್ಗ: ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಅಪರಾಧಿಗೆ ಶಿವಮೊಗ್ಗದ ಎಫ್.ಟಿ.ಎಸ್.ಸಿ. -1 ನ್ಯಾಯಾಲಯದ ನ್ಯಾಯಾಧೀಶರಾದ ಲತಾ ಕುಮಾರಿ 20 ವರ್ಷ ಶಿಕ್ಷೆ, ದಂಡ ವಿಧಿಸಿ ಆದೇಶ ನೀಡಿದ್ದಾರೆ.
2021 ರಲ್ಲಿ ಸರ್ವ ತಾಲೂಕಿನ 35 ವರ್ಷದ ವ್ಯಕ್ತಿ 14 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ. ಬಾಲಕಿ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಾಗಿ ತನಿಖಾಧಿಕಾರಿ ಎಲ್. ರಾಜಶೇಖರ್ ಚಾರ್ಜ್ ಶೀಟ್ ಸಲ್ಲಿಸಿದ್ದರು.
ಆರೋಪ ದೃಢಪಟ್ಟ ಹಿನ್ನೆಲೆಯಲ್ಲಿ ಅಪರಾಧಿಗೆ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ, 60,000 ದಂಡ ವಿಧಿಸಲಾಗಿದೆ. ದಂಡದ ಮೊತ್ತದಲ್ಲಿ 50,000 ರೂ. ಹಾಗೂ ಸರ್ಕಾರದಿಂದ 4 ಲಕ್ಷ ರೂ. ಸೇರಿ ಒಟ್ಟು 4.50 ಲಕ್ಷ ರೂ.ಗಳನ್ನು ನೊಂದ ಬಾಲಕಿಗೆ ಪರಿಹಾರವಾಗಿ ನೀಡಲು ಆದೇಶಿಸಲಾಗಿದೆ. ವಿಶೇಷ ಸರ್ಕಾರಿ ಅಭಿಯೋಜಕ ಹರಿಪ್ರಸಾದ್ ವಾದ ಮಂಡಿಸಿದ್ದರು.