ಜೈಪುರ: 8 ಅಡಿ ಉದ್ದದ ಮೊಸಳೆಯೊಂದು ಮನೆಯೊಳಗೆ ಪ್ರವೇಶಿಸಿದ ಆಘಾತಕಾರಿ ಘಟನೆ ರಾಜಸ್ಥಾನದ ಸವಾಯಿ ಮಾಧೋಪುರ್ ಜಿಲ್ಲೆಯಲ್ಲಿ ನಡೆದಿದೆ.
ಮನೆಗೆ ಮೊಸಳೆ ಪ್ರವೇಶಿಸಿದ್ದರಿಂದ ಜನರು ಬೆಚ್ಚಿಬಿದ್ದಿದ್ದಾರೆ. ಬಹ್ರವೀಂಡ ಖುರ್ದ್ ಪಟ್ಟಣದ ಹೊಸ ಕಾಲೋನಿ ಪ್ರದೇಶದಲ್ಲಿ ಘಟನೆ ಸಂಭವಿಸಿದೆ.
ಕೂಡಲೇ ಅರಣ್ಯ ಇಲಾಖೆ ಸಿಬ್ಬಂದಿಗೆ ಸ್ಥಳೀಯರು ಮಾಹಿತಿ ನೀಡಿದ್ದಾರೆ. ಸುದ್ದಿ ತಿಳಿದ ಕೂಡಲೇ ಸ್ಥಳಕ್ಕಾಗಮಿಸಿದ ಸಿಬ್ಬಂದಿ ಸತತ ಎರಡು ಗಂಟೆಗಳ ಪರಿಶ್ರಮದ ನಂತರ ಮೊಸಳೆಯನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಘಟನೆಯ ವಿಡಿಯೋ ಭಾರಿ ವೈರಲ್ ಆಗಿದ್ದು, ಮೊಸಳೆಯು ಬಲೆಯಿಂದ ಹೊರಬರಲು ಪ್ರಯತ್ನಿಸುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದಾಗಿದೆ.
ಮದುವೆಯ ಹೆಸರಲ್ಲಿ ಲೈಂಗಿಕ ಕ್ರಿಯೆ ಅತ್ಯಾಚಾರಕ್ಕೆ ಸಮ: ಅಲಹಾಬಾದ್ ಹೈಕೋರ್ಟ್
ಮೊಸಳೆಯು ಸಮೀಪದ ಕೊಳದಿಂದ ಹೊರಬಂದು ಚರಂಡಿ ಮೂಲಕ ಮನೆ ಪ್ರವೇಶಿಸಿದೆ ಎಂದು ಹೇಳಲಾಗಿದೆ. ಭಾರಿ ಮಳೆಯಾಗುತ್ತಿರುವುದರಿಂದ ಕೊಳದ ನೀರಿನ ಮಟ್ಟ ಹೆಚ್ಚಾಗಿದ್ದು, ಇದರಿಂದ ತನ್ನನ್ನು ತಾನು ರಕ್ಷಿಸಲು ಮೊಸಳೆ ಜನವಸತಿ ಪ್ರದೇಶಕ್ಕೆ ನುಗ್ಗಿದೆ. ಸದ್ಯ ರಕ್ಷಿಸಲ್ಪಟ್ಟ ಮೊಸಳೆಯನ್ನು ಕೆರೆಗೆ ಬಿಡಲಾಗಿದೆ ಎಂದು ಅರಣ್ಯಾಧಿಕಾರಿಗಳು ಮಾಹಿತಿ ನೀಡಿದ್ದಾರೆ.