ಬೆಂಗಳೂರು: ಅತಿವೃಷ್ಟಿ, ಅನಾವೃಷ್ಟಿ ನೈಸರ್ಗಿಕ ವಿಕೋಪದಿಂದ ಉಂಟಾಗುವ ಬೆಳೆ ಹಾನಿ ಪ್ರಕರಣಗಳಲ್ಲಿ ಜಿಲ್ಲಾಧಿಕಾರಿಗಳ ಮಟ್ಟದಲ್ಲಿಯೇ ಪರಿಹಾರ ಕಲ್ಪಿಸಲು ರಾಜ್ಯ ಸರ್ಕಾರ ಕ್ರಮ ಕೈಗೊಂಡಿದೆ.
ಕಂದಾಯ ಇಲಾಖೆ ವತಿಯಿಂದ ಈ ಬಗ್ಗೆ ಆದೇಶ ಹೊರಡಿಸಲಾಗಿದೆ. ಅತಿವೃಷ್ಟಿ, ಪ್ರವಾಹ, ಆಲಿಕಲ್ಲು ಮಳೆ, ಬರದಿಂದ ಸ್ಥಳೀಯ ಮಟ್ಟದಲ್ಲಿ ಉಂಟಾಗುವ ಬೆಲೆ ಹಾನಿಗಳಿಗೆ ಜಿಲ್ಲಾಧಿಕಾರಿ ಮಟ್ಟದಲ್ಲಿಯ ಪರಿಹಾರ ನೀಡಬೇಕು ಎಂದು ತಿಳಿಸಲಾಗಿದೆ.
ಅರ್ಹ ರೈತರಿಗೆ ಪರಿಹಾರ ತಂತ್ರಾಂಶದ ಮೂಲಕವೇ ಬೆಳೆ ಹಾನಿ ಪರಿಹಾರ ಒದಗಿಸಬೇಕು. ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದಿಂದ ಅನುಮೋದನೆಯಾದ ಬಳಿಕ ಅರ್ಹ ರೈತರ ಖಾತೆಗೆ ಪರಿಹಾರದ ಮೊತ್ತವನ್ನು ನೇರವಾಗಿ ವರ್ಗಾವಣೆ ಮಾಡಬೇಕೆಂದು ತಿಳಿಸಲಾಗಿದೆ.