ಬೆಂಗಳೂರು: ಕೇಂದ್ರದಿಂದ ವರದಿ ಬಂದ ಬಳಿಕ ಬೆಳೆ ಹಾನಿ ಪರಿಹಾರ ನೀಡಲಾಗುವುದು. ಬರದಿಂದ ರಾಜ್ಯದಲ್ಲಿ 39 ಲಕ್ಷ ಹೆಕ್ಟರ್ ಬೆಳೆಹಾನಿಯಾಗಿದೆ. ಈಗ ಮಳೆಯಾದರೂ ಬೆಳೆ ನಷ್ಟದ ತಡೆಯಲು ಸಾಧ್ಯವಿಲ್ಲ ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ಹೇಳಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರದ ಬರ ಅಧ್ಯಯನ ತಂಡ ಶೀಘ್ರವೇ ರಾಜ್ಯ ಸರ್ಕಾರಕ್ಕೆ ಬರದ ಬಗ್ಗೆ ಸ್ಪಷ್ಟತಾ ವರದಿ ನೀಡಲಿದೆ. ಇದಾದ ನಂತರ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಿ ರೈತರಿಗೆ ಮಧ್ಯಂತರ ಬೆಳೆ ಪರಿಹಾರ ನೀಡುವುದು, ಸೇರಿದಂತೆ ಹೇಗೆ ನೆರವಾಗಬೇಕು ಎಂಬ ಬಗ್ಗೆ ತೀರ್ಮಾನಿಸಲಾಗುವುದು ಎಂದು ಹೇಳಿದ್ದಾರೆ.
ಕೇಂದ್ರ ಅಧ್ಯಯನ ತಂಡ ಬೆಳೆ ಹಾನಿ ಪರಿಶೀಲನೆ ನಡೆಸಿದ್ದು, ಶೀಘ್ರವೇ ವರದಿ ನೀಡಲಿದೆ. ವರದಿ ಬಂದ ನಂತರ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಿ ರಾಜ್ಯ ಸರ್ಕಾರದಿಂದ ರೈತರಿಗೆ ಬೆಳೆ ಪರಿಹಾರ ನೀಡುವ ಬಗ್ಗೆ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.