ತುಮಕೂರು: ಇತ್ತೀಚೆಗೆ ಸುರಿದ ಭಾರೀ ಮಳೆಯಿಂದಾಗಿ ಅಪಾರ ಪ್ರಮಾಣದ ಬೆಳೆ ಹಾನಿಗೊಳಗಾಗಿದೆ. ಮನೆಗಳು ಹಾನಿಗೀಡಾಗಿದ್ದು, ನಷ್ಟ ಅನುಭವಿಸಿದವರಿಗೆ ಪರಿಹಾರ ನೀಡಲಾಗುವುದು ಎಂದು ವಸತಿ ಸಚಿವ ವಿ. ಸೋಮಣ್ಣ ತಿಳಿಸಿದ್ದಾರೆ.
ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಳೆಯಿಂದಾಗಿ ಅಪಾರ ಪ್ರಮಾಣದ ಬೆಳೆ ಹಾನಿಯಾಗಿದೆ. ಮನೆಗಳು ಕೂಡ ಹಾನಿಯಾಗಿದ್ದು, ಸರ್ಕಾರದಿಂದ ಸಂತ್ರಸ್ತರಿಗೆ ಪರಿಹಾರ ನೀಡಲು ಕ್ರಮಕೈಗೊಳ್ಳಲಾಗಿದೆ. ಸಿಎಂ ಸೂಕ್ತ ಪರಿಹಾರ ಒದಗಿಸಲು ತೀರ್ಮಾನಿಸಿದೆ. ಶೀಘ್ರವೇ ಸಂತ್ರಸ್ತರ ಖಾತೆಗೆ ಹಣ ಜಮಾ ಮಾಡಲಾಗುವುದು ಎಂದು ಹೇಳಿದ್ದಾರೆ.