ಬೆಂಗಳೂರು: ಅತಿವೃಷ್ಟಿಯಿಂದಾಗಿ ಬೆಳೆ ನಷ್ಟ ಉಂಟಾದ ರೈತರಿಗೆ ಶೀಘ್ರವೇ ಪರಿಹಾರ ಸಿಗಲಿದೆ ಎಂದು ಕಂದಾಯ ಸಚಿವ ಆರ್. ಅಶೋಕ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಮಳೆ ಅಬ್ಬರ ಮುಂದುವರೆದಿದೆ. ಸಂಪೂರ್ಣವಾಗಿ ಮಳೆ ನಿಂತ ನಂತರ ಸಮೀಕ್ಷೆ ಪೂರ್ಣಗೊಳಿಸಿ ಕೇಂದ್ರಕ್ಕೆ ವರದಿ ಸಲ್ಲಿಸಲಾಗುವುದು ಎಂದರು.
ಬೆಳೆ ಹಾನಿಗೊಳಗಾದ ರೈತರಿಗೆ ರಾಜ್ಯ ಸರ್ಕಾರದಿಂದ ಈ ಬಾರಿ ಶೀಘ್ರವೇ ಪರಿಹಾರ ಹಣ ನೀಡಲಾಗುವುದು. ನಂತರ ಕೇಂದ್ರ ಸರ್ಕಾರದಿಂದ ಬರುವ ಹಣವನ್ನು ರಾಜ್ಯ ಸರ್ಕಾರ ಬಳಸಿಕೊಳ್ಳಲಿದೆ ಎಂದು ಹೇಳಿದ್ದಾರೆ.
ಭಾರಿ ಮಳೆಯಿಂದಾಗಿ ಎಷ್ಟು ಬೆಳೆ ನಷ್ಟವಾಗಿದೆ ಎನ್ನುವುದು ಇನ್ನೂ ಗೊತ್ತಾಗಿಲ್ಲ. ಮಳೆ ಹಾನಿ ಪ್ರದೇಶಗಳಿಗೆ ಎಲ್ಲಾ ಸಚಿವರು ಭೇಟಿ ನೀಡಿದ್ದಾರೆ. ಕೇಂದ್ರದ ನಾಯಕರೊಂದಿಗೆ ಚರ್ಚೆ ಮಾಡಲಾಗುವುದು. ಮುಖ್ಯಮಂತ್ರಿಗಳು ಹೆಚ್ಚುವರಿ ಹಣ ಬಿಡುಗಡೆ ಮಾಡಿದ್ದಾರೆ. ಬೆಳೆ ನಷ್ಟಕ್ಕೆ ಒಳಗಾದ ರೈತರಿಗೆ ಶೀಘ್ರವೇ ಪರಿಹಾರ ನೀಡಲಾಗುತ್ತದೆ ಎಂದು ಹೇಳಿದ್ದಾರೆ.