ಚಿತ್ರದುರ್ಗ: ಮಳೆಯಿಂದ ಹಾನಿಗೊಳಗಾದ ಬೆಳೆ ಸಮೀಕ್ಷೆ ಕಾರ್ಯ ನಡೆದಿದೆ. ಸರ್ವೆ ಪೂರ್ಣಗೊಂಡು ಬೆಳೆ ಹಾನಿ ವರದಿಯನ್ನು ಅಧಿಕಾರಿಗಳು ಅಪ್ಲೋಡ್ ಮಾಡುತ್ತಿದ್ದಂತೆ ರೈತರಿಗೆ ಪರಿಹಾರ ನೀಡಲಾಗುವುದು ಎಂದು ಕಂದಾಯ ಸಚಿವ ಆರ್. ಅಶೋಕ್ ಹೇಳಿದ್ದಾರೆ.
ಚಿತ್ರದುರ್ಗ ತಾಲ್ಲೂಕಿನ ಓಬವ್ವನಾಗತಿಹಳ್ಳಿ, ದೊಡ್ಡಆಲಘಟ್ಟ ಗ್ರಾಮದಲ್ಲಿ ಮಳೆಯಿಂದ ಹಾನಿಗೊಳಗಾದ ಮುಸುಕಿನ ಜೋಳದ ಜಮೀನುಗಳಿಗೆ ತೆರಳಿ ಪರಿಶೀಲನೆ ನಡೆಸಿದರು.
ಬೆಳೆ ಹಾನಿಯಾದ ಬಗ್ಗೆ ರೈತರಿಂದ ಮಾಹಿತಿ ಪಡೆದ ಸಚಿವರು, ಅಧಿಕಾರಿಗಳು ಸರ್ವೆ ಕಾರ್ಯ ಕೈಗೊಂಡಿದ್ದು, ಬೆಳೆ ಹಾನಿ ವರದಿ ಅಪ್ಲೋಡ್ ಮಾಡುತ್ತಿದ್ದಂತೆ ತಿಂಗಳೊಳಗೆ ಪರಿಹಾರ ವಿತರಿಸಲಾಗುವುದು. ಈಗಾಗಲೇ ಮುಖ್ಯಮಂತ್ರಿಗಳೊಂದಿಗೆ ಮಾತನಾಡಿದ್ದು, ಬೆಳೆ ಪರಿಹಾರ ಮೊತ್ತವನ್ನು ಡಬಲ್ ಮಾಡಿದ್ದಾರೆ ಎಂದು ತಿಳಿಸಿದರು.