
ಹಾವೇರಿ: ಬೆಳೆ ಸಮೀಕ್ಷೆಯಲ್ಲಿ ಕರ್ತವ್ಯ ಲೋಪ ಎಸಗಿದ ಅಧಿಕಾರಿಯನ್ನು ಅಮಾನತು ಮಾಡಲಾಗಿದೆ. ಚನ್ನಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಕೆ.ಪಿ. ಮಾನೆ ಅವರನ್ನು ಅಮಾನತು ಮಾಡಲಾಗಿದೆ.
ಹಾವೇರಿ ಜಿಲ್ಲೆ ಹಿರೇಕೆರೂರು ತಾಲ್ಲೂಕಿನ ಚನ್ನಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮಾನೆ ಅವರು ದೂದಿಹಳ್ಳಿ ಗ್ರಾಮದ ಬೆಳೆ ಅಂದಾಜು ಸಮೀಕ್ಷೆಯಲ್ಲಿ ಕರ್ತವ್ಯ ಲೋಪ ಎಸಗಿದ್ದಾರೆ. ಅವರನ್ನು ಅಮಾನತು ಮಾಡಿ ಹಾವೇರಿ ಜಿಲ್ಲಾಧಿಕಾರಿ ರಘುನಂದನ ಮೂರ್ತಿ ಆದೇಶ ಹೊರಡಿಸಿದ್ದಾರೆ. ಫಸಲ್ ಭೀಮಾ ಯೋಜನೆಯ ಬೆಳೆ ಸಮೀಕ್ಷೆಯಲ್ಲಿ ಮಾನೆ ಅವರು ಕರ್ತವ್ಯ ಲೋಪ ಎಸಗಿದ್ದ ಆರೋಪ ಕೇಳಿ ಬಂದಿದೆ.