
ಚಿತ್ರದುರ್ಗ: ಶಿವಮೂರ್ತಿ ಮುರುಘಾ ಶರಣರ ವಿರುದ್ಧ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತ ಬಾಲಕಿಯರನ್ನು ಪೊಲೀಸರು ನ್ಯಾಯಾಲಯಕ್ಕೆ ಕರೆದುಕೊಂಡು ಬಂದಿದ್ದಾರೆ.
ಸಿ.ಆರ್.ಪಿ.ಸಿ. ಸೆಕ್ಷನ್ 164 ರ ಅಡಿ ನ್ಯಾಯಾಧೀಶರ ಎದುರು ಹೇಳಿಕೆ ದಾಖಲಿಸಲಾಗಿದೆ. ಜೆ.ಎಂ.ಎಫ್.ಸಿ. ಕೋರ್ಟ್ ನ್ಯಾಯಾಧೀಶರ ಎದುರು ಹೇಳಿಕೆ ದಾಖಲಿಸಲಾಗಿದೆ. ಚಿತ್ರದುರ್ಗ ವ್ಯಾಪ್ತಿಯಲ್ಲಿದ್ದ ಸಂತ್ರಸ್ತ ಬಾಲಕಿಯರಿಬ್ಬರೂ ಹೇಳಿಕೆ ದಾಖಲಿಸಿದ್ದಾರೆ. ಮೈಸೂರಿನಲ್ಲಿ ಇಬ್ಬರು ಬಾಲಕಿಯರಿಂದ ಪೊಲೀಸರು ಹೇಳಿಕೆ ಪಡೆದುಕೊಂಡಿದ್ದರು. ಸಿ.ಆರ್.ಪಿ.ಸಿ. ಸೆಕ್ಷನ್ 161 ರ ಅಡಿ ಹೇಳಿಕೆ ದಾಖಲಿಸಿಕೊಳ್ಳಲಾಗಿತ್ತು.