ಜಮ್ಮು ಮತ್ತು ಕಾಶ್ಮೀರದ ಸೋಪೋರ್‌ನಲ್ಲಿ CRPF ಕ್ಯಾಂಪ್ ಮೇಲೆ ಪೆಟ್ರೋಲ್ ಬಾಂಬ್ ಎಸೆದ ಬುರ್ಖಾಧಾರಿ ಮಹಿಳೆಯರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಮಹಿಳೆಯನ್ನು ಬಾರಾಮುಲ್ಲಾ ನಿವಾಸಿ ಹಸೀನಾ ಅಖ್ತರ್ ಎಂದು ಗುರುತಿಸಲಾಗಿದ್ದು, ಈಕೆ ನಿಷೇಧಿತ ಪ್ರತ್ಯೇಕತಾವಾದಿ ಗುಂಪು ದುಖ್ತರನ್ -ಎ-ಮಿಲಾತ್ ಜೊತೆ ನಿಕಟ ಸಂಬಂಧ ಹೊಂದಿದ್ದಾಳೆ ಎನ್ನಲಾಗಿದೆ. ಈಗಾಗಲೇ ಈಕೆ ಯುಪಿಎ ಅಡಿಯಲ್ಲಿ ಮೂರು ಪ್ರಕರಣಗಳನ್ನು ಎದುರಿಸುತ್ತಿದ್ದಾಳೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಮಂಗಳವಾರ ನಡೆದ ಈ ದಾಳಿಯ ದೃಶ್ಯ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ವ್ಯಾಪಕವಾಗಿ ಹರಿದಾಡುತ್ತಿದೆ.
ಬಾರಾಮುಲ್ಲಾ ಜಿಲ್ಲೆಯ ಸೋಪೋರ್ ಪಟ್ಟಣದ ಸೆಂಟ್ರಲ್ ರಿಸರ್ವ್ ಪೊಲೀಸ್ ಫೋರ್ಸ್ ಕ್ಯಾಂಪ್‌ನ ಸಿಸಿಟಿವಿ ಫೂಟೇಜ್‌ನಲ್ಲಿ ಮಹಿಳೆಯು ರಸ್ತೆಯ ಮಧ್ಯದಲ್ಲಿ ನಿಂತು ಬಾಂಬ್ನ್ನು ತೆಗೆದು ಕ್ಯಾಂಪ್ ಮೇಲೆ ಎಸೆದಿದ್ದಾಳೆ.
ಭದ್ರತಾ ಬ್ಯಾರಿಕೇಡ್‌ಗಳ ಹೊರಗೆ ಬಾಂಬ್ ಬಿದ್ದಿದ್ದು, ಯಾವುದೇ ಪ್ರಾಣ ಅಥವಾ ಆಸ್ತಿ ಹಾನಿಯಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.