
ಶ್ರೀನಗರ: CRPF ಬೆಟಾಲಿಯನ್ 178 ರ ಮೇಲೆ ಉಗ್ರರು ದಾಳಿ ನಡೆಸಿದ್ದಾರೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಶೋಪಿಯಾನ್ ನಲ್ಲಿ ಉಗ್ರರು ದಾಳಿ ನಡೆಸಿದ್ದು, ಸಿಆರ್ಪಿಎಫ್ ಯೋಧರೊಬ್ಬರಿಗೆ ಗಾಯವಾಗಿದೆ.
178 ನೇ ಬೆಟಾಲಿಯನ್ ಗುರಿಯಾಗಿಸಿಕೊಂಡು ಭಯೋತ್ಪಾದಕರು ದಾಳಿ ಮಾಡಿದ್ದಾರೆ. ಘಟನಾ ಸ್ಥಳಕ್ಕೆ ಹೆಚ್ಚಿನ ಭದ್ರತಾ ಸಿಬ್ಬಂದಿಯನ್ನು ರವಾನಿಸಲಾಗಿದೆ. ಹಿರಿಯ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿದ್ದಾರೆ ಎನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.