
ನವದೆಹಲಿ: ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ದರ ಆರು ತಿಂಗಳ ಕನಿಷ್ಠ ಮಟ್ಟಕ್ಕೆ ಕುಸಿದಿದೆ. ಪ್ರತಿ ಬ್ಯಾರೆಲ್ ಗೆ 69.66 ಡಾಲರ್ ಆಗಿದೆ.
ಪೆಟ್ರೋಲಿಯಂ ಉತ್ಪನ್ನಗಳ ರಫ್ತು ಮಾಡುವ ದೇಶಗಳ ಸಂಘಟನೆ -ಒಪೆಕ್ ಏಪ್ರಿಲ್ ನಿಂದ ತೈಲ ಉತ್ಪಾದನೆ ಹೆಚ್ಚಳ ಮಾಡುವುದಾಗಿ ಘೋಷಣೆ ಮಾಡಿದೆ. ಇದರ ಪರಿಣಾಮ ಮಾರುಕಟ್ಟೆಗೆ ಹೆಚ್ಚಿನ ಪ್ರಮಾಣದಲ್ಲಿ ತೈಲ ಪೂರೈಕೆಯಾಗುವ ಸಾಧ್ಯತೆ ಇರುವುದರಿಂದ ಬೆಲೆ ಇಳಿಕೆಯಾಗಿದೆ. ಇದರಿಂದಾಗಿ ಭಾರತೀಯ ತೈಲ ಸಂಸ್ಕರಣಾಗಾರ ಲಾಭ ಹೆಚ್ಚಾಗಿದೆ ಎಂದು ಹೇಳಲಾಗಿದೆ.
ದರ ಇಳಿಕೆಯ ಕಾರಣ ತೈಲ ಉತ್ಪಾದನೆ ಕಂಪನಿಗಳ ಷೇರು ಮೌಲ್ಯದಲ್ಲಿ ಏರಿಕೆ ಕಂಡಿದೆ. ಜಾಗತಿಕ ಕಚ್ಚಾ ತೈಲ ಬೆಲೆಗಳು ಆರು ತಿಂಗಳ ಕನಿಷ್ಠ ಮಟ್ಟಕ್ಕೆ ಇಳಿದ ನಂತರ, ಮಾರ್ಚ್ 6 ರ ಗುರುವಾರ ಭಾರತದ ಸರ್ಕಾರಿ ಸ್ವಾಮ್ಯದ ತೈಲ ಸಂಸ್ಕರಣಾಗಾರಗಳಾದ ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್(HPCL), ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್(BPCL), ಮತ್ತು ಇಂಡಿಯನ್ ಆಯಿಲ್ ಕಾರ್ಪೊರೇಷನ್(IOC) ಲಿಮಿಟೆಡ್ ಜೊತೆಗೆ ಚೆನ್ನೈ ಪೆಟ್ರೋ ಮತ್ತು MRPL ನಂತಹ ಇತರ ಸಂಸ್ಕರಣಾ ಕಂಪನಿಗಳ ಷೇರುಗಳು 5% ರಷ್ಟು ಏರಿಕೆಯಾಗಿವೆ.