ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್. ಷಡಾಕ್ಷರಿ ಅವರನ್ನು ಶಿವಮೊಗ್ಗದಿಂದ ಕೋಲಾರಕ್ಕೆ ವರ್ಗಾವಣೆ ಮಾಡಲಾಗಿದೆ.
ಶಿವಮೊಗ್ಗ ಸ್ಥಳೀಯ ಲೆಕ್ಕಪರಿಶೋಧನಾ ವರ್ತುಲದ ಜಂಟಿ ನಿರ್ದೇಶಕರ ಕಚೇರಿ ಲೆಕ್ಕಾಧೀಕ್ಷಕರಾಗಿದ್ದ ಸಿ.ಎಸ್. ಷಡಾಕ್ಷರಿ ಅವರನ್ನು ಕೋಲಾರ ಜಿಲ್ಲೆಯ ಸಮಾಜ ಕಲ್ಯಾಣ ಇಲಾಖೆಯ ಲೆಕ್ಕಾಧೀಕ್ಷಕ ಹುದ್ದೆಗೆ ಮಂಗಳವಾರ ವರ್ಗಾವಣೆ ಮಾಡಲಾಗಿದೆ.
ಷಡಾಕ್ಷರಿ ಅವರನ್ನು ವರ್ಗಾವಣೆ ಮಾಡಿರುವ ಬಗ್ಗೆ ರಾಜ್ಯ ಲೆಕ್ಕ ಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯ ಪ್ರಧಾನ ನಿರ್ದೇಶಕರಿಗೆ ಆರ್ಥಿಕ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಮಾಹಿತಿ ನೀಡಿದ್ದಾರೆ.