ಬೆಂಗಳೂರು: ಏಳನೇ ವೇತನ ಆಯೋಗದ ವರದಿ ಜಾರಿಗೆ ಆಗ್ರಹಿಸಿ ಸರ್ಕಾರಿ ನೌಕರರು ಮುಷ್ಕರ ಕೈಗೊಂಡಿದ್ದಾರೆ.
ಮಧ್ಯಂತರ ವೇತನದ ಹೆಚ್ಚಳ ಪ್ರಸ್ತಾಪವನ್ನು ರಾಜ್ಯ ಸರ್ಕಾರ ಮುಂದೆ ಇಟ್ಟಿದ್ದು, ರಾಜ್ಯ ಸರ್ಕಾರಿ ನೌಕರರ ಸಂಘದೊಂದಿಗೆ ಸಿಎಂ ಬೊಮ್ಮಾಯಿ ಸಮಾಲೋಚನೆ ನಡೆಸಿದ್ದಾರೆ. ತಾತ್ಕಾಲಿಕವಾಗಿ ಶೇಕಡ ಏಳರಿಂದ 8ರಷ್ಟು ವೇತನ ಏರಿಕೆ ಮಾಡುವ ಭರವಸೆ ನೀಡಿದ್ದಾರೆ. ವೇತನ ಏರಿಕೆಯ ಮಧ್ಯಂತರ ಪರಿಹಾರ ಸೂತ್ರಕ್ಕೆ ನೌಕರರ ಸಂಘ ಒಪ್ಪಿಕೊಂಡಿದೆ ಎಂದು ಹೇಳಲಾಗಿದೆ.
ಪದಾಧಿಕಾರಿಗಳ ಸಭೆಯ ನಿರ್ಣಯವನ್ನು ಮುಖ್ಯಮಂತ್ರಿಗಳ ಗಮನಕ್ಕೆ ತಂದಿದ್ದೇವೆ. ಇಂದು ಬೆಳಗ್ಗೆ ಮತ್ತೊಮ್ಮೆ ಭೇಟಿ ಮಾಡಲು ಮುಖ್ಯಮಂತ್ರಿಗಳು ತಿಳಿಸಿದ್ದಾರೆ. ಮಧ್ಯಂತರ ಪರಿಹಾರದ ಆದೇಶ ಪ್ರಕಟವಾದರೆ ಮಾತ್ರ ಮುಷ್ಕರ ವಾಪಸ್ ಪಡೆಯಲಾಗುವುದು ಎಂದು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ ಮಾಹಿತಿ ನೀಡಿದ್ದಾರೆ.
ಸರ್ಕಾರಿ ನೌಕರರ ಮುಷ್ಕರದಲ್ಲಿ ಬದಲಾವಣೆ ಇಲ್ಲ. ನಮ್ಮ ಹೋರಾಟ ಮುಂದುವರೆಯಲಿದೆ. ಶೇಕಡ 40ರಷ್ಟು ವೇತನ ಹೆಚ್ಚಳ ಮಾಡಬೇಕು. ನಮ್ಮ ಬೇಡಿಕೆ ಮುಖ್ಯಮಂತ್ರಿಗಳ ಮುಂದೆ ಇಟ್ಟಿದ್ದೇವೆ. ಮುಖ್ಯಮಂತ್ರಿಗಳು ಕೂಡ ತಮ್ಮ ನಿಲುವು ತಿಳಿಸಿದ್ದಾರೆ. ಸರ್ಕಾರದ ಆದೇಶ ಖಚಿತವಾದರೆ ಮುಷ್ಕರ ಕೈಬಿಡುತ್ತೇವೆ ಎಂದು ಸಭೆಯ ಬಳಿಕ ಷಡಾಕ್ಷರಿ ತಿಳಿಸಿದ್ದಾರೆ.