ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆ(ಡಿಎ) ಹೆಚ್ಚಳ ಆಗಿಲ್ಲ. ನೌಕರರಿಗೆ ದೀಪಾವಳಿಗೆ ಸಿಹಿ ಸುದ್ದಿ ಸಿಕ್ಕಿದೆ. ಶೇಕಡ 2 ರಷ್ಟು ಡಿಎ ಹೆಚ್ಚಳವಾಗಿದೆ ಎಂದು ಕೆಲವು ಮಾಧ್ಯಮಗಳಲ್ಲಿ ಬಂದ ವರದಿ ಸುಳ್ಳಾಗಿದೆ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ ಹೇಳಿದ್ದಾರೆ.
ಡಿಯೆ ಹೆಚ್ಚಳಕ್ಕೆ ಸಂಬಂಧಿಸಿದಂತೆ ಸರ್ಕಾರದಿಂದ ಯಾವುದೇ ಅಧಿಕೃತ ಘೋಷಣೆ ಮಾಡಿಲ್ಲ. ಶೇಕಡ 3 ರಷ್ಟು ತುಟ್ಟಿಭತ್ಯೆ ನೀಡುವಂತೆ ಸರ್ಕಾರಕ್ಕೆ ರಾಜ್ಯ ಸರ್ಕಾರಿ ನೌಕರರ ಸಂಘದಿಂದ ಮನವಿ ಮಾಡಲಾಗಿದೆ ಎಂದು ತಿಳಿಸಿದ್ದಾರೆ.