ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ ಅವರ ವಿಷಯದಲ್ಲಿ ಬೈಲಾ ರೀತಿಯಲ್ಲಿ ಕ್ರಮ ಕೈಗೊಂಡು ವರದಿ ನೀಡುವಂತೆ ಸಹಕಾರ ಸಂಘಗಳ ಉಪನಿಬಂಧಕರ ಜಿಲ್ಲಾ ನೋಂದಣಾಧಿಕಾರಿಗಳು ನೌಕರರ ಸಂಘದ ಕಾರ್ಯದರ್ಶಿಗೆ ನೋಟಿಸ್ ಜಾರಿ ಮಾಡಿದ್ದಾರೆ. ಷಡಾಕ್ಷರಿ ಅವರನ್ನು ಅಮಾನತ್ತು ಮಾಡಿ ಆದೇಶ ಹೊರಡಿಸಿಲ್ಲ ಎಂದು ರಾಜ್ಯ ಸರ್ಕಾರ ನೌಕರರ ಸಂಘ ಸ್ಪಷ್ಟಪಡಿಸಿದೆ.
ಯಾರೇ ದೂರು ನೀಡಿದರೂ ಅದಕ್ಕೆ ಸಂಬಂಧಿಸಿದಂತೆ ಇಲಾಖಾಧಿಕಾರಿಗಳು ಪತ್ರ ಬರೆಯುವುದು ಸಾಮಾನ್ಯ. ರಾಜ್ಯ ಪರಿಷತ್ ಸದಸ್ಯರು ನೀಡಿದ ದೂರಿನ ಅನ್ವಯ ಸಹಕಾರ ಸಂಘಗಳ ಜಿಲ್ಲಾ ನೋಂದಣಾಧಿಕಾರಿಗಳು ಸಂಘಕ್ಕೆ ಪತ್ರ ಬರೆದಿದ್ದಾರೆ. ಆದರೆ, ಇದು ಆದೇಶವಲ್ಲ ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ್ ತಿಳಿಸಿದ್ದಾರೆ.
ಸಹಕಾರ ಸಂಘದ ನೋಂದಣಾಧಿಕಾರಿಗಳ ಪತ್ರಕ್ಕೆ ಉತ್ತರ ನೀಡಲಾಗುವುದು. ಷಡಾಕ್ಷರಿ ವರ್ಗಾವಣೆ ವಿಚಾರ ಕೆಎಟಿ ನ್ಯಾಯಾಲಯದಲ್ಲಿದೆ ಎಂದು ಹೇಳಿದ್ದಾರೆ.