
2023ರ ಐಪಿಎಲ್ ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಯಾರು ಮುನ್ನಡೆಸಲಿದ್ದಾರೆ ಎಂಬ ಪ್ರಶ್ನೆ ಹಲವರಲ್ಲಿದ್ದು, ಇದೀಗ ಧೋನಿ ಅಭಿಮಾನಿಗಳಿಗೆ ಖುಷಿ ಸುದ್ದಿಯೊಂದು ಇಲ್ಲಿದೆ.
2023ರ ಇಂಡಿಯನ್ ಪ್ರೀಮಿಯರ್ ಲೀಗ್ ನಲ್ಲಿ ಮಹೇಂದ್ರ ಸಿಂಗ್ ಧೋನಿ ಅವರೇ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಮುನ್ನಡೆಸಲಿದ್ದಾರೆ ಎಂದು ಸಿ.ಎಸ್.ಕೆ. ಸಿಇಓ ಕಾಶಿ ವಿಶ್ವನಾಥನ್ ಹೇಳಿದ್ದಾರೆ.
ಭಾನುವಾರದಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಚೆನ್ನೈ ಸೂಪರ್ ಕಿಂಗ್ಸ್ ನಿರ್ಧಾರದಲ್ಲಿ ಯಾವುದೇ ಬದಲಾವಣೆಗಳಿಲ್ಲ. ಧೋನಿಯೇ ನಾಯಕರಾಗಿ ಮುಂದುವರೆಯಲಿದ್ದಾರೆ ಎಂದು ತಿಳಿಸಿದ್ದಾರೆ.
2023 ರಲ್ಲಿ ಹದಿನಾರನೇ ಆವೃತ್ತಿಯ ಪಂದ್ಯಗಳು ನಡೆಯಲಿದ್ದು, ಐಪಿಎಲ್ ನಲ್ಲಿ ಈಗಾಗಲೇ ನಾಲ್ಕು ಬಾರಿ ಚಾಂಪಿಯನ್ ಆಗಿರುವ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಮಹೇಂದ್ರ ಸಿಂಗ್ ಧೋನಿ ನಾಯಕರಾಗಿರಲಿದ್ದಾರೆ.