alex Certify ‘ಕ್ಯಾಪ್ಟನ್ ಕೂಲ್’ ಅಭಿಮಾನಿಗಳಿಗೆ ಭರ್ಜರಿ ಗುಡ್ ನ್ಯೂಸ್; 2023ರ ಐಪಿಎಲ್ ಗೂ ಧೋನಿಯೇ CSK ನಾಯಕ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಕ್ಯಾಪ್ಟನ್ ಕೂಲ್’ ಅಭಿಮಾನಿಗಳಿಗೆ ಭರ್ಜರಿ ಗುಡ್ ನ್ಯೂಸ್; 2023ರ ಐಪಿಎಲ್ ಗೂ ಧೋನಿಯೇ CSK ನಾಯಕ

‘ಕ್ಯಾಪ್ಟನ್ ಕೂಲ್’ ಖ್ಯಾತಿಯ ಮಹೇಂದ್ರ ಸಿಂಗ್ ಧೋನಿ ಟೀಮ್ ಇಂಡಿಯಾದಿಂದ ನಿವೃತ್ತಿಯಾಗಿದ್ದರೂ ಸಹ ಐಪಿಎಲ್ ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಮುನ್ನಡೆಸುತ್ತಿದ್ದಾರೆ.

2023ರ ಐಪಿಎಲ್ ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಯಾರು ಮುನ್ನಡೆಸಲಿದ್ದಾರೆ ಎಂಬ ಪ್ರಶ್ನೆ ಹಲವರಲ್ಲಿದ್ದು, ಇದೀಗ ಧೋನಿ ಅಭಿಮಾನಿಗಳಿಗೆ ಖುಷಿ ಸುದ್ದಿಯೊಂದು ಇಲ್ಲಿದೆ.

2023ರ ಇಂಡಿಯನ್ ಪ್ರೀಮಿಯರ್ ಲೀಗ್ ನಲ್ಲಿ ಮಹೇಂದ್ರ ಸಿಂಗ್ ಧೋನಿ ಅವರೇ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಮುನ್ನಡೆಸಲಿದ್ದಾರೆ ಎಂದು ಸಿ.ಎಸ್.ಕೆ. ಸಿಇಓ ಕಾಶಿ ವಿಶ್ವನಾಥನ್ ಹೇಳಿದ್ದಾರೆ.

ಭಾನುವಾರದಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಚೆನ್ನೈ ಸೂಪರ್ ಕಿಂಗ್ಸ್ ನಿರ್ಧಾರದಲ್ಲಿ ಯಾವುದೇ ಬದಲಾವಣೆಗಳಿಲ್ಲ. ಧೋನಿಯೇ ನಾಯಕರಾಗಿ ಮುಂದುವರೆಯಲಿದ್ದಾರೆ ಎಂದು ತಿಳಿಸಿದ್ದಾರೆ.

2023 ರಲ್ಲಿ ಹದಿನಾರನೇ ಆವೃತ್ತಿಯ ಪಂದ್ಯಗಳು ನಡೆಯಲಿದ್ದು, ಐಪಿಎಲ್ ನಲ್ಲಿ ಈಗಾಗಲೇ ನಾಲ್ಕು ಬಾರಿ ಚಾಂಪಿಯನ್ ಆಗಿರುವ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಮಹೇಂದ್ರ ಸಿಂಗ್ ಧೋನಿ ನಾಯಕರಾಗಿರಲಿದ್ದಾರೆ.

— Dhoni Army TN™🦁 (@DhoniArmyTN) September 4, 2022

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...