alex Certify BIG BREAKING: ನಾಯಕತ್ವ ಬದಲಾವಣೆ ಸುಳಿವು ನೀಡಿದ ಸಿ.ಟಿ. ರವಿ ಹೇಳಿಕೆಗೆ ಸಿಎಂ BSY ಪ್ರತಿಕ್ರಿಯೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ನಾಯಕತ್ವ ಬದಲಾವಣೆ ಸುಳಿವು ನೀಡಿದ ಸಿ.ಟಿ. ರವಿ ಹೇಳಿಕೆಗೆ ಸಿಎಂ BSY ಪ್ರತಿಕ್ರಿಯೆ

ಬೆಳಗಾವಿ: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಜನಪ್ರಿಯ ನಾಯಕರಾಗಿದ್ದು, ಪಕ್ಷ ಅವರಿಗೆ ಬಹಳಷ್ಟು ಅವಕಾಶಗಳನ್ನು ನೀಡಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ನೀಡಿದ ಹೇಳಿಕೆಗೆ ಸಿಎಂ ಬಿ.ಎಸ್. ಯಡಿಯೂರಪ್ಪ ಪ್ರತಿಕ್ರಿಯೆ ನೀಡಿದ್ದಾರೆ.,

ರಾಜ್ಯದಲ್ಲಿ ಯಾವ ನಾಯಕರಿಗೂ ಸಿಗದಷ್ಟು ಅವಕಾಶ ನನಗೆ ಸಿಕ್ಕಿದೆ. ಪಕ್ಷದ ನಾಯಕರು ನನಗೆ ಅವಕಾಶ ಕೊಟ್ಟಿದ್ದಾರೆ. ಸಮಾಧಾನದಿಂದ ಇದ್ದೇನೆ. ಏನೂ ಆಗಲ್ಲ, ನಮ್ಮ ಪಾರ್ಟಿಯಲ್ಲಿ ಅನೇಕ ಹಿರಿಯ ನಾಯಕರಿದ್ದಾರೆ. ಕೇಂದ್ರ ನಾಯಕರ ಸೂಚನೆಯಂತೆ ನಾವೆಲ್ಲರೂ ಒಂದಾಗಿ ಕೆಲಸ ಮಾಡಿ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ತರುತ್ತೇವೆ ಎಂದು ತಿಳಿಸಿದ್ದಾರೆ.

ನೂರು ಸಿದ್ಧರಾಮಯ್ಯನವರು ಬಂದರೂ ಪಕ್ಷ ಅಧಿಕಾರಕ್ಕೆ ತರುತ್ತೇವೆ. ರಮೇಶ್ ಜಾರಕಿಹೊಳಿ ಗೋಕಾಕ್ ನಲ್ಲಿರಲಿಲ್ಲ ಎಂದು ಪತ್ರಕರ್ತರ ಪ್ರಶ್ನೆಗಳಿಗೆ ಉತ್ತರಿಸಿದ ಬಿ.ಎಸ್.ವೈ. ಅವರು, ಸಿ.ಟಿ ರವಿ. ಹೇಳಿದ್ದು ಸರಿ ಇದೆ. ನಾವೆಲ್ಲರೂ ಒಟ್ಟಾಗಿ ಕೆಲಸ ಮಾಡಿ ಪಕ್ಷವನ್ನು ಅಧಿಕಾರಕ್ಕೆ ತರುತ್ತೇವೆ ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...