alex Certify ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆ ಬಗ್ಗೆ ಸಿ.ಟಿ. ರವಿ ಅಚ್ಚರಿ ಹೇಳಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆ ಬಗ್ಗೆ ಸಿ.ಟಿ. ರವಿ ಅಚ್ಚರಿ ಹೇಳಿಕೆ

ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಸಿ.ಟಿ. ರವಿ ಅವರನ್ನು ಕೈ ಬಿಡಲಾಗಿದ್ದು, ರಾಜ್ಯಾಧ್ಯಕ್ಷ ಸ್ಥಾನಕ್ಕೆ ಅವರನ್ನು ನೇಮಕ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ. ಆದರೆ, ಸಿ.ಟಿ. ರವಿ ನಾನು ರಾಜ್ಯಾಧ್ಯಕ್ಷ ಸ್ಥಾನಕ್ಕೆ ಆಕಾಂಕ್ಷಿಯಲ್ಲ ಎಂದು ಹೇಳಿದ್ದಾರೆ.

ನಾನು ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಆಕಾಂಕ್ಷಿಯಲ್ಲ, ರಾಜ್ಯಾಧ್ಯಕ್ಷ ಅನ್ನುವುದು ಜವಾಬ್ದಾರಿಯುತ ಸ್ಥಾನ. ಹುದ್ದೆಯನ್ನು ಕೇಳಿ ಪಡೆಯುವಂತಹುದಲ್ಲ. ಇದರ ಬಗ್ಗೆ ಪಕ್ಷ ನಿರ್ಧರಿಸುತ್ತದೆ ಎಂದು ಬಿಜೆಪಿ ನಾಯಕ ಸಿ.ಟಿ. ರವಿ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಕೊಕ್ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿ, ಪಕ್ಷದ ಯಾವುದೇ ಹುದ್ದೆ, ಅಧಿಕಾರ ಶಾಶ್ವತ ಅಲ್ಲ. ನಾನೀಗ ಮಾಜಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ. ಪಕ್ಷದ ಕಾರ್ಯಕರ್ತನಾಗಿ ನನ್ನ ಕೆಲಸ ಮುಂದುವರಿಸುತ್ತೇನೆ ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...