ಬೆಂಗಳೂರು: ಬಿಜೆಪಿ ರಾಷ್ಟ್ರಿಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಅವರನ್ನು ಪಕ್ಷದ ರಾಜ್ಯಾಧ್ಯಕ್ಷರಾಗಿ ನೇಮಕ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
ಬಿಜೆಪಿ ಕೇಂದ್ರ ಸಮಿತಿಯಲ್ಲಿ ಈಗಾಗಲೇ 8 ಮಂದಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳಿದ್ದು, ಬುಧವಾರ ಉತ್ತರ ಪ್ರದೇಶದ ಸುನಿಲ್ ಬನ್ಸಾಲ್ ಅವರನ್ನು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ. ಹೀಗಾಗಿ, ಸಿ.ಟಿ. ರವಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸ್ಥಾನದಿಂದ ನಿರ್ಗಮಿಸಿ ರಾಜ್ಯ ಅಧ್ಯಕ್ಷರಾಗಿ ನೇಮಕವಾಗುವ ಸಾಧ್ಯತೆ ಇದೆ.
ಪ್ರಸ್ತುತ ರಾಜ್ಯ ಅಧ್ಯಕ್ಷರಾಗಿರುವ ನಳಿನ್ ಕುಮಾರ್ ಕಟೀಲ್ ಅವರ ಅವಧಿ ಆಗಸ್ಟ್ 20 ಕ್ಕೆ ಮುಕ್ತಾಯವಾಗಲಿದ್ದು, ಅಗತ್ಯವಿದ್ದಾಗ ಸರ್ಕಾರ ಮತ್ತು ಪಕ್ಷವನ್ನು ಸಮರ್ಥಿಸಿಕೊಂಡು ಪ್ರತಿಪಕ್ಷಗಳ ವಿರುದ್ಧ ಹರಿಹಾಯುವ ಸಿ.ಟಿ. ರವಿ ರಾಜ್ಯ ರಾಜಕಾರಣಕ್ಕೆ ಮರಳಬಹುದು ಎನ್ನಲಾಗಿದೆ.
ರಾಜ್ಯದಲ್ಲಿ ಸಚಿವರಾಗಿದ್ದ ಅವರು ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಕವಾದ ನಂತರ ಸಚಿವ ಸ್ಥಾನ ತೊರೆದಿದ್ದರು. ವಿವಿಧ ರಾಜ್ಯಗಳಲ್ಲಿ ಬಿಜೆಪಿ ಉಸ್ತುವಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದು, ಅವರೇ ರಾಜ್ಯಾಧ್ಯಕ್ಷರಾಗಿ ನೇಮಕವಾಗಬಹುದು ಎನ್ನಲಾಗಿದೆ.