alex Certify ಯಾರೇ ಅಭ್ಯರ್ಥಿಯಾದರೂ ಕೆಲಸ ಮಾಡುತ್ತೇವೆ: ಸಿ.ಟಿ. ರವಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಯಾರೇ ಅಭ್ಯರ್ಥಿಯಾದರೂ ಕೆಲಸ ಮಾಡುತ್ತೇವೆ: ಸಿ.ಟಿ. ರವಿ

ಚಿಕ್ಕಮಗಳೂರು: ಯಾರೇ ಅಭ್ಯರ್ಥಿಯಾದರೂ ನಾವು ಕೆಲಸ ಮಾಡುತ್ತೇವೆ. ನಮ್ಮ ವೈಮನಸ್ಸು ಇಡೀ ದೇಶಕ್ಕೆ ಆಪತ್ತನ್ನು ತರಬಾರದು ಎಂದು ಬಿಜೆಪಿ ನಾಯಕ ಸಿ.ಟಿ. ರವಿ ಹೇಳಿದ್ದಾರೆ.

ಚಿಕ್ಕಮಗಳೂರು ಕ್ಷೇತ್ರದ ಬಿಜೆಪಿ ಟಿಕೆಟ್ ಕುರಿತಾಗಿ ಕಾರ್ಯಕರ್ತರು ಪ್ರತಿಭಟನೆ ನಡೆಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ನಿಮ್ಮ ಭಾವನೆ ತಿಳಿಸಲು ಬೇರೆ ಬೇರೆ ಆಯ್ಕೆಗಳು ಇವೆ ಎಂದು ಕಾರ್ಯಕರ್ತರಿಗೆ ಕಿವಿಮಾತು ಹೇಳಿದ್ದಾರೆ.

ಶೋಭಾ ಕರಂದ್ಲಾಜೆ ಅವರಿಗೆ ಬಿಜೆಪಿ ಟಿಕೆಟ್ ವಿಚಾರವಾಗಿ ಕಾರ್ಯಕರ್ತರು ಆಕ್ಷೇಪ ವ್ಯಕ್ತಪಡಿಸಿರುವುದಕ್ಕೆ ಪಕ್ಷದ ಕಾರ್ಯಕರ್ತರಿಗೆ ಕಿವಿಮಾತು ಹೇಳಿದ ಸಿ.ಟಿ. ರವಿ, ರಾಷ್ಟ್ರದ ಹಿತ ಗಮನದಲ್ಲಿಟ್ಟುಕೊಂಡು ರಾಜಕಾರಣ ಮಾಡಬೇಕು. ನಮ್ಮ ವೈಮನಸ್ಸು ಕಾಂಗ್ರೆಸ್ ಪಕ್ಷಕ್ಕೆ ಲಾಭ ಆಗಬಾರದು. ನನ್ನ ಗ್ರಹಚಾರ ಸರಿ ಇರಲಿಲ್ಲ ಎಂದು ವಿಧಾನಸಭೆ ಸೋಲು ನೆನೆದು ಬೇಸರ ವ್ಯಕ್ತಪಡಿಸಿದ್ದಾರೆ. ಪಕ್ಷ ವಿರೋಧಿ ಕೆಲಸ ಮಾಡಿದವರು ಅನುಭವಿಸುತ್ತಾರೆ ಅವರವರ ಕರ್ಮಗಳನ್ನು ಅವರ ಅನುಭವಿಸುತ್ತಾರೆ ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...