alex Certify ಸಿಡ್ನಿಯಲ್ಲಿ ಮೊಳಗಿದ ಕಾಂತಾರ ಗೀತೆ, ಯಕ್ಷಗಾನ ಪ್ರದರ್ಶನ; ಪ್ರಧಾನಿ ಮೋದಿ ಕಾರ್ಯಕ್ರಮದಲ್ಲಿ ಕರುನಾಡ ಸಾಂಸ್ಕೃತಿಕ ವೈಭವ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಿಡ್ನಿಯಲ್ಲಿ ಮೊಳಗಿದ ಕಾಂತಾರ ಗೀತೆ, ಯಕ್ಷಗಾನ ಪ್ರದರ್ಶನ; ಪ್ರಧಾನಿ ಮೋದಿ ಕಾರ್ಯಕ್ರಮದಲ್ಲಿ ಕರುನಾಡ ಸಾಂಸ್ಕೃತಿಕ ವೈಭವ

ಮೂರು ದಿನಗಳ ಕಾಲ ಆಸ್ಟ್ರೇಲಿಯಾ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿಯವರು ಸಿಡ್ನಿಯಲ್ಲಿ ಭಾರತೀಯ ಸಾಂಸ್ಕೃತಿಕ ಪರಂಪರೆಯ ಕಾರ್ಯಕ್ರಮಗಳನ್ನು ವೀಕ್ಷಿಸಿದ್ದಾರೆ.

ಆಸ್ಟ್ರೇಲಿಯಾದ ಪ್ರಧಾನಿ ಆಂಥೋನಿ ಅಲ್ಬನೀಸ್ ಅವರೊಂದಿಗೆ ದ್ವಿಪಕ್ಷೀಯ ಸಭೆ ನಡೆಸಿದ ಬಳಿಕ ಅವರು ಬುಧವಾರದಂದು ವಿಶೇಷ ಸಮುದಾಯ ಕಾರ್ಯಕ್ರಮದಲ್ಲಿ ಭಾಗವಹಿಸಿದರು.

ಭಾರತೀಯ ಆಸ್ಟ್ರೇಲಿಯನ್ ಡಯಾಸ್ಪೊರಾ ಫೌಂಡೇಶನ್ (IADF) ಪ್ರಧಾನಿ ಮೋದಿ ಅವರನ್ನು ಸ್ವಾಗತಿಸಲು ಮತ್ತು ಕರಾವಳಿ ಕರ್ನಾಟಕದ ಶ್ರೀಮಂತ ಸಾಂಸ್ಕೃತಿಕ ಪರಂಪರೆಯನ್ನು ಆಚರಿಸಲು ಅದ್ಭುತ ಸಾಂಸ್ಕೃತಿಕ ಕಾರ್ಯಕ್ರಮವನ್ನು ಆಯೋಜಿಸಿತು.

ಸಾಂಸ್ಕೃತಿಕ ಕಾರ್ಯಕ್ರಮವು 20 ಸಾವಿರಕ್ಕೂ ಹೆಚ್ಚು ಪ್ರೇಕ್ಷಕರನ್ನು ಆಕರ್ಷಿಸಿತು. ಕಾರ್ಯಕ್ರಮದಲ್ಲಿ ಮಂಗಳೂರಿನ ಬಿಜೈ ಕಾಪಿಕಾಡು ನಿವಾಸಿ ಅನಿಶಾ ಪೂಜಾರಿ ನೇತೃತ್ವದ ತಂಡವು ನೃತ್ಯ ಪ್ರಸ್ತುತಪಡಿಸಿತು.

ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಕರಾವಳಿ ಕರ್ನಾಟಕದ ಇತರ ಸಾಂಪ್ರದಾಯಿಕ ಕಲಾ ಪ್ರಕಾರಗಳಾದ ಜಾನಪದ ನೃತ್ಯಗಳು ಮತ್ತು ಯಕ್ಷಗಾನವನ್ನು ಪ್ರದರ್ಶಿಸಲಾಯಿತು. ನಾಟ್ಯ ವಿದುಷಿ ಪಲ್ಲವಿ ಭಾಗವತ್ ಅವರು ಕನ್ನಡದ ʼಕಾಂತಾರʼ ಚಿತ್ರದ ಗೀತೆ ಹಾಡಿದರು.

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...