ಬೆಂಗಳೂರು : ಸುಳ್ಳು ಸುದ್ದಿಗಳಿಗೆ ಬ್ರೇಕ್ ಹಾಕಲು ರಾಜ್ಯ ಸರ್ಕಾರ ಮಹತ್ವದ ಕ್ರಮ ಕೈಗೊಂಡಿದ್ದು, ಮೂರು ತಂಡ ರಚನೆ ಮಾಡಲಿದೆ.
ಈ ಬಗ್ಗೆ ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಮಾಹಿತಿ ನೀಡಿದ್ದು, ಸೋಶಿಯಲ್ ಮೀಡಿಯಾದಲ್ಲಿ ಸುಳ್ಳು ಸುದ್ದಿ ತಡೆಗೆ ಹೊಸ ವ್ಯವಸ್ಥೆ ಜಾರಿಗೊಳಿಸಲಾಗುತ್ತಿದ್ದು, ಶೀಘ್ರವೇ ಪ್ರತ್ಯೇಕ ತಂಡ ರಚಿಸಿ ಪ್ರಕ್ರಿಯೆಗೆ ಚಾಲನೆ ನೀಡಲಾಗುತ್ತದೆ ಎಂದು ಪ್ರಿಯಾಂಕ್ ಖರ್ಗೆ ಹೇಳಿದರು.
ವಿಧಾನಸೌಧದಲ್ಲಿ ಮಾತನಾಡಿದ ಸಚಿವರು ಇತ್ತೀಚಿನ ದಿನಗಳಲ್ಲಿ ಸೋಶಿಯಲ್ ಮೀಡಿಯಾದಲ್ಲಿ ಸುಳ್ಳು ಸುದ್ದಿ ಹರಡುವ ಪ್ರಕ್ರಿಯೆ ಹೆಚ್ಚುತ್ತಿದೆ. ಅದನ್ನು ತಡೆಯಲು ಸರ್ಕಾರ ಹೊಸ ವ್ಯವಸ್ಥೆ ಜಾರಿಗೊಳಿಸುತ್ತಿದೆ. ಕೋಮು ಸೌಹಾರ್ದಕ್ಕೆ ಧಕ್ಕೆ ತರುವಂತಹ ಸುದ್ದಿಗಳನ್ನು ಹಂಚಿಕೊಂಡರೆ ಅದನ್ನು ಪತ್ತೆ ಮಾಡಿ ಎಚ್ಚರಿಕೆ ನೀಡಲಾಗುತ್ತದೆ ಎಂದರು.
ಸುಳ್ಳು ಸುದ್ದಿಗಳನ್ನು ಪತ್ತೆ ಮಾಡಿ ಸತ್ಯಾನುಸತ್ಯತೆ ಪರಿಶೀಲನೆಗೆ ಫ್ಯಾಕ್ಟ್ ಚೆಕ್ ತಂಡ ರಚನೆ ಮಾಡಲಾಗುತ್ತದೆ. ಫ್ಯಾಕ್ಟ್ ಚೆಕ್ ತಂಡದ ಪತ್ತೆ ಸರಿ ಇದೆಯೇ ಎಂಬುದನ್ನು ಅನಾಲಿಟಿಕ್ ತಂಡ ನೋಡುತ್ತದೆ. ಜನರಲ್ಲಿ ಜಾಗೃತಿ ಮೂಡಿಸಲು ಕೆಪಾಸಿಟಿ ಬಿಲ್ಡಿಂಗ್ ತಂಡ ರಚಿಸಲಾಗುತ್ತದೆ ಎಂದಿದ್ದಾರೆ. ಹೀಗೆ ಈ ಮೂರು ತಂಡಗಳು ಕಾರ್ಯ ನಿರ್ವಹಿಸಲಿದೆ ಎಂದು ಮಾಹಿತಿ ನೀಡಿದ್ದಾರೆ.