ಬಹುತೇಕ ಎಲ್ಲರೂ ಮೊಸರು ಸೇವನೆಯನ್ನು ಇಷ್ಟಪಡ್ತಾರೆ. ಮೊಸರು ಹೊಟ್ಟೆ ಸಮಸ್ಯೆಯನ್ನು ಕಡಿಮೆ ಮಾಡುತ್ತದೆ. ಜೀರ್ಣಾಂಗ ಕ್ರಿಯೆಯನ್ನು ಉತ್ತಮಗೊಳಿಸುತ್ತದೆ. ಹೃದಯ ಸಂಬಂಧಿ ಖಾಯಿಲೆಯಿರುವವರಿಗೆ ಮೊಸರು ಸೇವನೆ ಮಾಡುವಂತೆ ಸಲಹೆ ನೀಡಲಾಗುತ್ತದೆ.
ಮೊಸರಿನಲ್ಲಿ ಕ್ಯಾಲ್ಸಿಯಂ, ಪ್ರೋಟೀನ್, ವಿಟಮಿನ್-ಬಿ 6 ಮತ್ತು ವಿಟಮಿನ್-ಬಿ 12 ಸೇರಿದಂತೆ ಅನೇಕ ಪೋಷಕಾಂಶಗಳಿವೆ. ಇವು ಆರೋಗ್ಯಕರ ದೇಹಕ್ಕೆ ಅಗತ್ಯ. ಮೊಸರು, ಹೊಟ್ಟೆಯಲ್ಲಿ ಸೋಂಕು ಬರದಂತೆ ತಡೆಯುತ್ತದೆ. ಹಸಿವು ಕಡಿಮೆ ಇರುವವರಿಗೂ ಇದು ಪ್ರಯೋಜನಕಾರಿಯಾಗಿದೆ.
ಮೊಸರು ಕೂದಲು, ರಕ್ತದೊತ್ತಡ, ಆಸ್ಟಿಯೊಪೊರೋಸಿಸ್ ಮತ್ತು ಮೂಳೆಗಳಿಗೆ ಅನೇಕ ರೀತಿಯಲ್ಲಿ ಪ್ರಯೋಜನವನ್ನು ನೀಡುತ್ತದೆ ಮೊಸರು ನಮ್ಮ ದೇಹದಲ್ಲಿನ ಕೊಲೆಸ್ಟ್ರಾಲ್ ಕಡಿಮೆ ಮಾಡಲು ಮತ್ತು ತೂಕವನ್ನು ಕಡಿಮೆ ಮಾಡಲು ಸಹಕಾರಿಯಾಗಿದೆ. ಚರ್ಮದ ಕಾಯಿಲೆಗಳನ್ನು ಗುಣಪಡಿಸಲು ಮೊಸರು ಉಪಯುಕ್ತವೆಂದು ಪರಿಗಣಿಸಲಾಗುತ್ತದೆ.
ಮೊಸರು ರೋಗ ನಿರೋಧಕ ಶಕ್ತಿಯನ್ನು ಬಲಪಡಿಸುವ ಕೆಲಸ ಮಾಡುತ್ತದೆ. ಉತ್ತಮ ಬ್ಯಾಕ್ಟೀರಿಯಾಗಳು ರೋಗ ನಿರೋಧಕ ಶಕ್ತಿಯನ್ನು ಸುಧಾರಿಸುತ್ತದೆ. ಮೊಸರನ್ನು ಕ್ಯಾಲ್ಸಿಯಂನ ಉತ್ತಮ ಮೂಲವೆಂದು ಪರಿಗಣಿಸಲಾಗುತ್ತದೆ. ಕ್ಯಾಲ್ಸಿಯಂ ಮೂಳೆಗಳನ್ನು ಬಲಪಡಿಸಲು ಸಹಾಯ ಮಾಡುತ್ತದೆ. ಶೀತ ಮತ್ತು ಕೆಮ್ಮಿನ ಸಮಸ್ಯೆಯಿರುವವರು ಮೊಸರು ಸೇವನೆ ಮಾಡಬಾರದು.