alex Certify ಗಮನಿಸಿ…! ಅಗತ್ಯ ಸೇವೆ ಹೊರತಾಗಿ ಇಂದು ರಾತ್ರಿಯಿಂದ ಸೋಮವಾರದವರೆಗೆ ಸಂಪೂರ್ಣ ಬಂದ್: ವೀಕೆಂಡ್ ಕರ್ಫ್ಯೂ ಜಾರಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗಮನಿಸಿ…! ಅಗತ್ಯ ಸೇವೆ ಹೊರತಾಗಿ ಇಂದು ರಾತ್ರಿಯಿಂದ ಸೋಮವಾರದವರೆಗೆ ಸಂಪೂರ್ಣ ಬಂದ್: ವೀಕೆಂಡ್ ಕರ್ಫ್ಯೂ ಜಾರಿ

ಬೆಂಗಳೂರು: ಕೊರೋನಾ ತಡೆಗೆ ವೀಕೆಂಡ್ ಕರ್ಫ್ಯೂ ಘೋಷಿಸಿರುವುದರಿಂದ ಶುಕ್ರವಾರ ರಾತ್ರಿ 10 ಗಂಟೆಯಿಂದ ಸೋಮವಾರ ಬೆಳಿಗ್ಗೆ 5 ಗಂಟೆಯವರೆಗೆ ಅತ್ಯಾವಶ್ಯಕ ಮತ್ತು ತುರ್ತು ಕಾರ್ಯಗಳ ಹೊರತುಪಡಿಸಿ ಜನರ ಓಡಾಟವನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ.

ಸಾರ್ವಜನಿಕರು ಅತ್ಯಾವಶ್ಯಕ ಮತ್ತು ತುರ್ತು ಕಾರ್ಯಚಟುವಟಿಕೆಗಳನ್ನು ಹೊರತುಪಡಿಸಿ, ಶುಕ್ರವಾರ ರಾತ್ರಿ 10 ಗಂಟೆಯಿಂದ ಸೋಮವಾರ ಬೆಳಿಗ್ಗೆ 5 ಗಂಟೆಯವರೆಗೆ ಜನರ ಓಡಾಟವನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ.

ಮಾರ್ಗಸೂಚಿಗಳು

ತುರ್ತು, ಅತ್ಯಾವಶ್ಯಕ ಸೇವೆಗಳು ಮತ್ತು ಕೋವಿಡ್-19 ನಿಯಂತ್ರಣ ಮತ್ತು ನಿರ್ವಹಣಾ ಕಾರ್ಯಗಳನ್ನು ನಿರ್ವಹಿಸುವ ಎಲ್ಲಾ ರಾಜ್ಯ ಮತ್ತು ಕೇಂದ್ರ ಸರ್ಕಾರಿ ಕಚೇರಿಗಳು ಮತ್ತು ಅವುಗಳ ಸ್ವಾಯತ್ತ ಸಂಸ್ಥೆಗಳು, ನಿಗಮಗಳು ಮುಂತಾದವುಗಳು ಸಂಪೂರ್ಣವಾಗಿ ಕಾರ್ಯನಿರ್ವಹಿಸತಕ್ಕದ್ದು ಮತ್ತು ಅವುಗಳ ಅಧಿಕಾರಿ, ಸಿಬ್ಬಂದಿಗೆ ಅನಿಬರ್ಂಧಿತ ಓಡಾಟಕ್ಕೆ ಅವಕಾಶ ನೀಡತಕ್ಕದ್ದು.

ಎಲ್ಲಾ ಸಾರ್ವಜನಿಕ ಉದ್ಯಾನಗಳು ಮುಚ್ಚಿರತಕ್ಕದ್ದು.

ಮಾಹಿತಿ ತಂತ್ರಜ್ಞಾನ ಉದ್ದಿಮೆಗಳು ಒಳಗೊಂಡಂತೆ ಎಲ್ಲಾ ಉದ್ದಿಮೆಗಳ ಕಾರ್ಯಾಚರಣೆಗೆ ಕರ್ಫ್ಯೂನಿಂದ ವಿನಾಯತಿ ನೀಡಿದೆ. ನೌಕರರು ಆಯಾ ಸಂಘ, ಸಂಸ್ಥೆಗಳು ನೀಡುವ ಅಧಿಕೃತ ಗುರುತಿನ ಚೀಟಿಯನ್ನು ಹಾಜರುಪಡಿಸುವ ಮೂಲಕ ಸಂಚರಿಸಲು ಅನುಮತಿಸುವುದು.

ತುರ್ತು ಚಿಕಿತ್ಸೆಗಾಗಿ ಸಂಚರಿಸಬೇಕಾದ ಅಗತ್ಯವಿರುವ ರೋಗಿಗಳು, ಅವರ ಪರಿಚಾರಕರು, ವ್ಯಕ್ತಿಗಳಿಗೆ ಮತ್ತು ಲಸಿಕೆ ಹಾಕಿಸಿಕೊಳ್ಳಲು ಉದ್ದೇಶಿಸಿರುವ ವ್ಯಕ್ತಿಗಳಿಗೆ ಕನಿಷ್ಠ ರುಜುವಾತನ್ನು ಹಾಜರುಪಡಿಸಿ ಸಂಚರಿಸಲು ಅನುಮತಿಸತಕ್ಕದ್ದು.

ಬೇಕರಿ, ಆಹಾರ, ದಿನಸಿ, ಹಣ್ಣು ಮತ್ತು ತರಕಾರಿಗಳು, ಡೈರಿ ಮತ್ತು ಹಾಲಿನ ಬೂತುಗಳು, ಮಾಂಸ ಮತ್ತು ಮೀನು, ಪಶು ಆಹಾರದ ಅಂಗಡಿಗಳು ಕಾರ್ಯನಿರ್ವಹಿಸಲು ಅನುಮತಿಸಲಾಗಿದೆ. ಬೀದಿ ಬದಿ ವ್ಯಾಪಾರಿಗಳಿಗೆ ಅನುಮತಿಸಿದೆ. ಸಾರ್ವಜನಿಕ ವಿತರಣೆಯ ನ್ಯಾಯಬೆಲೆ ಅಂಗಡಿಗಳು ಕಾರ್ಯನಿರ್ವಹಿಸಲು ಅನುಮತಿಸಿದೆ. ಜನರು ತಮ್ಮ ಮನೆಯ ಹೊರಗೆ ಓಡಾಡುವುದನ್ನು ಕಡಿಮೆ ಮಾಡುವುದಕ್ಕಾಗಿ 24×7 ಅವಧಿಯಲ್ಲಿ ಸಾಮಗ್ರಿಗಳನ್ನು ಮನೆಮನೆಗೆ ವಿತರಿಸಲು (Home Delivery) ಪ್ರೋತ್ಸಾಹಿಸತಕ್ಕದ್ದು. ಈ ಎಲ್ಲಾ ಕಾರ್ಯಾಚರಣೆಗಳು ಕೋವಿಡ್-19ರ ನಿರ್ವಹಣೆಯ ಸಂಬಂಧ ಹೊರಡಿಸಲಾದ ರಾಷ್ಟ್ರೀಯ ನಿರ್ದೇಶನಗಳನ್ನು ಕಟ್ಟುನಿಟ್ಟಾಗಿ ಪಾಲಿಸುವುದಕ್ಕೆ ಒಳಪಟ್ಟಿರತಕ್ಕದ್ದು.

ರೆಸ್ಟೋರೆಂಟ್ ಮತ್ತು ಹೋಟೆಲ್‍ಗಳಲ್ಲಿ ಆಹಾರವನ್ನು ಮನೆಗೆ ತೆಗೆದುಕೊಂಡು ಹೋಗಲು ಮಾತ್ರ ಅನುಮತಿಸತಕ್ಕದ್ದು.

ರೈಲುಗಳ ಸಂಚಾರಕ್ಕೆ ಮತ್ತು ವಿಮಾನ ಪ್ರಯಾಣಕ್ಕೆ ಅನುಮತಿಸಿದೆ. ವಿಮಾನ, ರೈಲು ಮತ್ತು ರಸ್ತೆ ಮೂಲಕ ಪ್ರಯಾಣಿಕರ ಸಂಚಾರಕ್ಕೆ ಅನುವು ಮಾಡಿಕೊಡುವುದಕ್ಕಾಗಿ ವಿಮಾನ ನಿಲ್ದಾಣಗಳಿಗೆ, ರೈಲ್ವೆ ನಿಲ್ದಾಣಗಳಿಗೆ ಹೋಗಿ ಬರುವುದಕ್ಕೆ ಸಾರ್ವಜನಿಕ ಸಾರಿಗೆ ವಾಹನಗಳ ಸಂಚಾರಕ್ಕೆ, ಖಾಸಗಿ ವಾಹನಗಳು ಮತ್ತು ಟ್ಯಾಕ್ಸಿಗಳ (ಕಂಪನಿಗಳು ನಿರ್ವಹಿಸುವ ಕ್ಯಾಬಗಳು ಸೇರಿದಂತೆ) ಸಂಚಾರಕ್ಕೆ ಅನುಮತಿ ನೀಡಲಾಗಿದೆ. ಸಿಂಧುವಾದ ಪ್ರಯಾಣ ದಾಖಲೆ ಅಥವಾ ಟಿಕೇಟನ್ನು ಪ್ರದರ್ಶಿಸಿದ ನಂತರ ಮತ್ತು ಕೋವಿಡ್ ಸಮುಚಿತ ವರ್ತನೆಯನ್ನು ಪಾಲಿಸುವ ಷರತ್ತಿಗೊಳಪಟ್ಟು ಮಾತ್ರವೇ ಅಂಹತ ಸಂಚಾರಕ್ಕೆ ಅನುಮತಿಸುವುದು.

ಕೋವಿಡ್-19 ಸಮುಚಿತ ವರ್ತನೆಗಳನ್ನು (CAB) ಹಾಗೂ ಅಸ್ತಿತ್ವದಲ್ಲಿರುವ ಸರ್ಕಾರದ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸುವ ಷರತ್ತಿಗೊಳಪಟ್ಟು ಹೊರಾಂಗಣಗಳಲ್ಲಿ 200 ಜನರು ಮೀರದಂತೆ ಹಾಗೂ ಒಳಾಂಗಣಗಳಲ್ಲಿ 100 ಜನರು ಮೀರದಂತೆ ಮದುವೆ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಅನುಮತಿಸಿದೆ.

ಅಸ್ತಿತ್ವದಲ್ಲಿರುವ ಮಾರ್ಗಸೂಚಿಗಳ ಅನುಸಾರ ರಾಜ್ಯಾದ್ಯಂತ ರಾತ್ರಿ 10 ಗಂಟೆಯಿಂದ ಮರುದಿನ ಬೆಳಿಗ್ಗೆ 5 ಗಂಟೆಯವರೆಗೆ ‘ರಾತ್ರಿ ಕರ್ಫ್ಯೂ ಮುಂದುವರೆಸಲಾಗಿದೆ.

ಎಲ್ಲಾ ರೀತಿಯ ರ್ಯಾಲಿ (Rally) ಗಳನ್ನು ಧರಣಿಗಳನ್ನು ಮತ್ತು ಮುಷ್ಕರಗಳನ್ನು ನಿರ್ಬಂಧಿಸಿದೆ.

ಈ ಕ್ರಮಗಳನ್ನು ಉಲ್ಲಂಘಿಸುವ ಯಾವುದೇ ವ್ಯಕ್ತಿಯು, ಭಾರತ ದಂಡ ಸಂಹಿತೆ 188ನೇ ಪ್ರಕರಣದಡಿ ಹಾಗೂ ಅನ್ವಯವಾಗಬಹುದಾದ ಇತರ ಕಾನೂನು ಉಪಬಂಧಗಳಡಿಯಲ್ಲಿನ ಕಾನೂನು ಕ್ರಮದ ಜೊತೆಗೆ ವಿಪತ್ತು ನಿರ್ವಹಣಾ ಅಧಿನಿಯಮ, 2005ರ ಸೆಕ್ಷನ್ 51 ರಿಂದ 60ರನ್ವಯ ಕಾನೂನು ಕ್ರಮಕ್ಕೆ ಒಳಪಡುತ್ತಾರೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...