ಬೆಂಗಳೂರು: ರಾಜ್ಯದಲ್ಲಿ ಮೇ 4 ರವರೆಗೆ ಕಠಿಣ ನಿಯಮ ಮುಂದುವರೆಸುವ ಸಾಧ್ಯತೆ ಇದೆ. ನೈಟ್ ಕರ್ಫ್ಯೂ ಮತ್ತು ವೀಕೆಂಡ್ ಕರ್ಫ್ಯೂ ಯಶಸ್ವಿಯಾಗಿದ್ದು, ಸೋಂಕು ತಡೆ ಉದ್ದೇಶದಿಂದ ಮೇ 4 ರವರೆಗೂ ನೈಟ್ ಕರ್ಫ್ಯೂ ಜೊತೆಗೆ ಬೆಳಗ್ಗೆ 6 ರಿಂದ 10 ಗಂಟೆಯವರೆಗೆ ಅಗತ್ಯ ವಸ್ತು ಖರೀದಿಗೆ ಅವಕಾಶ ನೀಡಿ 10 ಗಂಟೆಯಿಂದಲೇ ಕರ್ಫ್ಯೂ ಜಾರಿಗೊಳಿಸುವ ಕುರಿತಾಗಿ ಚರ್ಚೆ ನಡೆದಿದೆ ಎನ್ನಲಾಗಿದೆ.
ರಾಜ್ಯದಲ್ಲಿ ಕರ್ಫ್ಯೂ ಮುಂದುವರೆಸುವ ಬಗ್ಗೆ ಇಂದು ನಡೆಯಲಿರುವ ಕ್ಯಾಬಿನೆಟ್ ಸಭೆಯಲ್ಲಿ ಚರ್ಚೆ ನಡೆಸಲಾಗುವುದು. ಬೆಳಗ್ಗೆ 11 ಗಂಟೆಗೆ ಸಿಎಂ ಅಧ್ಯಕ್ಷತೆಯಲ್ಲಿ ಸಚಿವ ಸಂಪುಟ ಸಭೆ ನಡೆಯಲಿದ್ದು, ಸಭೆಯಲ್ಲಿ ಚರ್ಚೆ ನಡೆಸಿ ಮುಂದಿನ ತೀರ್ಮಾನ ಕೈಗೊಳ್ಳಲಾಗುತ್ತದೆ. ವಾರಪೂರ್ತಿ ಕರ್ಫ್ಯೂ ಅಥವಾ ಲಾಕ್ಡೌನ್ ಜಾರಿ ಮಾಡುವ ಕುರಿತು ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗುವುದು. ಹೊಸ ಮಾರ್ಗಸೂಚಿ ರಿಲೀಸ್ ಮಾಡಲಾಗುವುದು ಎಂದು ಹೇಳಲಾಗಿದೆ.