ಬೆಂಗಳೂರು: ರಾಜ್ಯದಲ್ಲಿ ಮೇ 4 ರವರೆಗೆ ಕಠಿಣ ನಿಯಮ ಮುಂದುವರೆಯಲಿದೆ. ನೈಟ್ ಕರ್ಫ್ಯೂ ಮತ್ತು ವೀಕೆಂಡ್ ಕರ್ಫ್ಯೂ ಮೇ 4 ರವರೆಗೂ ಮುಂದುವರೆಯಲಿದ್ದು, ರಾಜ್ಯದಲ್ಲಿ ಕರ್ಫ್ಯೂ ಮುಂದುವರೆಸುವ, ಲಾಕ್ಡೌನ್ ಜಾರಿ ಮಾಡುವ ಕುರಿತು ನಾಳೆ ನಡೆಯಲಿರುವ ಕ್ಯಾಬಿನೆಟ್ ಸಭೆಯಲ್ಲಿ ಚರ್ಚೆ ನಡೆಸಲಾಗುವುದು ಎಂದು ಕೈಗಾರಿಕೆ ಸಚಿವ ಜಗದೀಶ್ ಶೆಟ್ಟರ್ ಹೇಳಿದ್ದಾರೆ.
ನಾಳೆ ಬೆಳಗ್ಗೆ 11 ಗಂಟೆಗೆ ಸಿಎಂ ಅಧ್ಯಕ್ಷತೆಯಲ್ಲಿ ಸಚಿವ ಸಂಪುಟ ಸಭೆ ನಡೆಯಲಿದ್ದು, ಸಭೆಯಲ್ಲಿ ಚರ್ಚೆ ನಡೆಸಿ ಮುಂದಿನ ತೀರ್ಮಾನ ಕೈಗೊಳ್ಳಲಾಗುತ್ತದೆ. ನಾಳೆಯಿಂದ ವಾರಪೂರ್ತಿ ಕರ್ಫ್ಯೂ ಅಥವಾ ಲಾಕ್ಡೌನ್ ಜಾರಿ ಮಾಡುವ ಕುರಿತು ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಅವರು ಹೇಳಿದ್ದಾರೆ.
ಕೊರೊನಾ ಸೋಂಕು ತೀವ್ರತರವಾಗಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕಂಪ್ಲೀಟ್ ಕರ್ಫ್ಯೂ ಅಥವಾ ಲಾಕ್ಡೌನ್ ಜಾರಿ ಮಾಡಲಾಗುತ್ತದೆ. ದೆಹಲಿ ಮಾದರಿಯಲ್ಲಿ ಮೇ 4 ರವರೆಗೆ ಲಾಕ್ ಡೌನ್ ಜಾರಿ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.