alex Certify 19 ಜಿಲ್ಲೆಯಲ್ಲಿ ಲಾಕ್ಡೌನ್ ನಿರ್ಬಂಧ ಸಡಿಲ: ಮಧ್ಯಾಹ್ನ 2 ಗಂಟೆವರೆಗೆ ಆರ್ಥಿಕ ಚಟುವಟಿಕೆ -ಮದುವೆಗೆ 40, ಅಂತ್ಯಕ್ರಿಯೆಗೆ 5 ಜನರಿಗೆ ಅವಕಾಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

19 ಜಿಲ್ಲೆಯಲ್ಲಿ ಲಾಕ್ಡೌನ್ ನಿರ್ಬಂಧ ಸಡಿಲ: ಮಧ್ಯಾಹ್ನ 2 ಗಂಟೆವರೆಗೆ ಆರ್ಥಿಕ ಚಟುವಟಿಕೆ -ಮದುವೆಗೆ 40, ಅಂತ್ಯಕ್ರಿಯೆಗೆ 5 ಜನರಿಗೆ ಅವಕಾಶ

 ಬೆಂಗಳೂರು: ರಾಜ್ಯದ 19 ಜಿಲ್ಲೆಗಳಲ್ಲಿ ಲಾಕ್ಡೌನ್ ನಿರ್ಬಂಧ ಸಡಿಲಿಕೆ ಮಾಡಲಾಗಿದೆ. ಅಂತ್ಯ ಸಂಸ್ಕಾರಕ್ಕೆ 5 ಜನ, ಮದುವೆಗೆ 40 ಜನ ಭಾಗವಹಿಸಲು ಸಮ್ಮತಿ ನೀಡಲಾಗಿದೆ.

ಬೆಂಗಳೂರು ನಗರ, ಕೋಲಾರ, ರಾಮನಗರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ಉಡುಪಿ, ಹಾವೇರಿ, ಉತ್ತರಕನ್ನಡ, ಧಾರವಾಡ, ಗದಗ, ಕೊಪ್ಪಳ, ಬಾಗಲಕೋಟೆ, ಬಳ್ಳಾರಿ, ವಿಜಯಪುರ, ಕಲಬುರಗಿ, ಬೀದರ್ ಜಿಲ್ಲೆಗಳಲ್ಲಿ ಬೆಳಿಗ್ಗೆ 6 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಆರ್ಥಿಕ ಚಟುವಟಿಕೆ ನಡೆಸಲು ಅವಕಾಶ ನೀಡಲಾಗಿದೆ.

ಅದೇ ರೀತಿ ಅಗತ್ಯ ವಸ್ತು, ಮದ್ಯ ಖರೀದಿಗೆ ಮಧ್ಯಾಹ್ನ 2 ಗಂಟೆ ವರೆಗೆ ಅವಕಾಶ ನೀಡಲಾಗಿದೆ. ಶೇಕಡ 50 ರಷ್ಟು ಸಿಬ್ಬಂದಿಯೊಂದಿಗೆ ಕೈಗಾರಿಕೆಗಳು ಕಾರ್ಯ ನಿರ್ವಹಿಸಬಹುದಾಗಿದೆ. ಎಲ್ಲಾ ನಿರ್ಮಾಣ ಚಟುವಟಿಕೆಗಳನ್ನು ಆರಂಭಿಸಲು ಅವಕಾಶ ನೀಡಿದ್ದು, ಬೆಳಗ್ಗೆ 5 ರಿಂದ 10 ಗಂಟೆಯ ವರಗೆ ಪಾರ್ಕ್ ಗಳನ್ನು ತೆರೆಯಬಹುದು.

ಪ್ರತಿದಿನ ಸಂಜೆ 7 ರಿಂದ ಬೆಳಗ್ಗೆ 5 ಗಂಟೆ ವರೆಗೆ ನೈಟ್ ಕರ್ಫ್ಯೂ ಜಾರಿಯಲ್ಲಿರಲಿದೆ. ವೀಕೆಂಡ್ ಕರ್ಫ್ಯೂ ಶುಕ್ರವಾರ ರಾತ್ರಿ ಸಂಜೆ 7 ರಿಂದ ಸೋಮವಾರ ಬೆಳಗ್ಗೆ 5 ಗಂಟೆಯವರೆಗೆ ಜಾರಿಯಲ್ಲಿರುತ್ತದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...