![](https://kannadadunia.com/wp-content/uploads/2021/04/curfew-corona-8.png)
ಬೆಂಗಳೂರು: ಬೆಂಗಳೂರಿನಲ್ಲಿ ವೀಕೆಂಡ್ ಕರ್ಫ್ಯೂ ನಡುವೆಯೂ ಅನಗತ್ಯವಾಗಿ ಓಡಾಟ ನಡೆಸುತ್ತಿದ್ದವರಿಗೆ ಪೊಲೀಸರು ಬಿಸಿ ಮುಟ್ಟಿಸಿದ್ದಾರೆ.
ಕರ್ಫ್ಯೂ ನಡುವೆಯೂ ನಿಯಮ ಮೀರಿ ರಸ್ತೆಗಿಳಿದ ವಾಹನಗಳನ್ನು ಸೀಜ್ ಮಾಡಲಾಗಿದೆ. ಬೆಂಗಳೂರು ಪಶ್ಚಿಮ ವಿಭಾಗದಲ್ಲಿ ವೀಕೆಂಡ್ ಕರ್ಫ್ಯೂ ಇದ್ರೂ ಅನಗತ್ಯವಾಗಿ ಓಡಾಡುತ್ತಿದ್ದ 22 ದ್ವಿಚಕ್ರವಾಹನ ಮತ್ತು ಎರಡು ಆಟೋಗಳನ್ನು ಪೊಲೀಸರು ಸೀಜ್ ಮಾಡಿದ್ದಾರೆ.