alex Certify CWG 2022: ಭಾರತಕ್ಕೆ ಮತ್ತೊಂದು ಪದಕ; ವೇಟ್ ಲಿಫ್ಟಿಂಗ್ ನಲ್ಲಿ ಬಿಂದಿಯಾ ರಾಣಿಗೆ ‘ಬೆಳ್ಳಿ’ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

CWG 2022: ಭಾರತಕ್ಕೆ ಮತ್ತೊಂದು ಪದಕ; ವೇಟ್ ಲಿಫ್ಟಿಂಗ್ ನಲ್ಲಿ ಬಿಂದಿಯಾ ರಾಣಿಗೆ ‘ಬೆಳ್ಳಿ’

ಕಾಮನ್ವೆಲ್ತ್ ಕ್ರೀಡಾಕೂಟದಲ್ಲಿ ಭಾರತಕ್ಕೆ ಮತ್ತೊಂದು ಪದಕ ಲಭಿಸಿದೆ. ವೇಟ್ ಲಿಫ್ಟಿಂಗ್ ನ 55 ಕೆಜಿ ವಿಭಾಗದಲ್ಲಿ ಭಾರತದ ಬಿಂದಿಯಾ ರಾಣಿ ಬೆಳ್ಳಿ ಪದಕ ಗಳಿಸಿದ್ದಾರೆ. ಈ ಮೂಲಕ ಭಾರತಕ್ಕೆ ನಾಲ್ಕನೇ ಪದಕ ಲಭಿಸಿದಂತಾಗಿದೆ.

ಈಗಾಗಲೇ ಮೀರಾಬಾಯಿ ಚಾನು ಚಿನ್ನದ ಪದಕ ಗಳಿಸಿದ್ದರೆ, ಸಂಕೇತ್ ಸರ್ಗರ್ ಬೆಳ್ಳಿ ಪದಕಕ್ಕೆ ಭಾಜನರಾಗಿದ್ದರು. ಅಲ್ಲದೆ ಕರ್ನಾಟಕದ ಗುರುರಾಜ್ ಪೂಜಾರಿ ಕಂಚಿನ ಪದಕವನ್ನು ಗಳಿಸಿದ್ದರು.

ಇದೀಗ ಬಿಂದಿಯಾ ರಾಣಿ ಭಾರತಕ್ಕೆ ನಾಲ್ಕನೇ ಪದಕ ಗಳಿಸಿಕೊಟ್ಟಿದ್ದಾರೆ. ಈ ಮೂಲಕ ಭಾರತಕ್ಕೆ ಈವರೆಗೆ ಒಂದು ಚಿನ್ನ, ಎರಡು ಬೆಳ್ಳಿ ಹಾಗೂ ಒಂದು ಕಂಚಿನ ಪದಕ ಲಭಿಸಿದಂತಾಗಿದೆ. ಈ ಮೂಲಕ ಪದಕ ಪಟ್ಟಿಯಲ್ಲಿ ಭಾರತದ ಸ್ಥಾನ ಮೇಲಕ್ಕೆ ಏರಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...