
ಚಿತ್ರದುರ್ಗ: ಸೈಬರ್ ವಂಚಕರ ಕಬಂದ ಬಾಹು ವ್ಯಾಪಕವಾಗಿ ಹರಡುತ್ತಿದೆ. ಜನರು ಎಷ್ಟೇ ಎಚ್ಚರವಾಗಿದ್ದರೂ ವಂಚಕರ ಜಾಲಕ್ಕೆ ಸಿಲುಕಿ ಹಣ ಕಳೆದುಕೊಳ್ಳುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ.
ಟ್ರಾಯ್ ಹಾಗೂ ಪೊಲೀಸ್ ಅಧಿಕಾರಿಗಳು ಎಂದು ಕರೆ ಮಾಡಿ ಹಿರಿಯ ವೈದ್ಯರೊಬ್ಬರಿಗೆ ವಂಚಕರು ಕೋಟ್ಯಂತರ ರೂಪಾಯಿ ವಂಚಿಸಿರುವ ಘಟನೆ ಚಿತ್ರದುರ್ಗದಲ್ಲಿ ಬೆಳಕಿಗೆ ಬಂದಿದೆ.
ಹಿರಿಯ ವೈದ್ಯ ಡಾ.ಶ್ರೀನಿವಾಸ್ ಶೆಟ್ಟಿ ಎಂಬುವವರಿಗೆ ಕರೆ ಮಾಡಿರುವ ಸೈಬರ್ ವಂಚಕರು ನಾವು ಟ್ರಾಯ್ ಹಗೂ ಮುಂಬೈ ಪೊಲೀಸರು ಎಂದು ಹೇಳಿದ್ದಾರೆ. ನಿಮ್ಮ ಬ್ಯಾಂಕ್ ಖಾತೆ ಬಳಸಿ ಮನಿ ಲ್ಯಾಂಡರಿಂಗ್ ವಂಚನೆ ಆಗಿದೆ. ಖಾತೆಯ ಹಣದ ಆಡಿಟ್ ಮಾಡಬೇಕು ಎಂದು ನಂಬಿಸಿದ್ದಾರೆ. ಖಾತೆ ಡೀಲ್ ಹೇಳುವಂತೆ ಕೇಳಿದ್ದಾರೆ.
ಬ್ಯಾಂಕ್ ಖಾತೆ ವಿವರ ಪಡೆದ ವಂಚಕರು ವೈದ್ಯರ ಖಾತೆಯಿಂದ 1.27 ಕೋಟಿ ಹಣ ವರ್ಗಾವಣೆ ಮಾಡಿಕೊಂಡು ಮೋಸ ಮಾಡಿದ್ದಾರೆ. ಹಣ ಕಳೆದುಕೊಂಡ ವೈದ್ಯರು ಚಿತ್ರದುರ್ಗದ ಸಿಇಎನ್ ಠಾಣೆಗೆ ದೂರು ನೀಡಿದ್ದಾರೆ.