ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಫೆಂಗಲ್ ಚಂಡಮಾರುತ ಪುದುಚೇರಿ, ತಮಿಳುನಾಡು ಕರಾವಳಿಗೆ ಅಪ್ಪಳಿಸಿದೆ.
ತಮಿಳುನಾಡಿನಲ್ಲಿ ಚಂಡಮಾರುತದ ಅಬ್ಬರಕ್ಕೆ ನಾಲ್ವರು ಬಲಿಯಾಗಿದ್ದಾರೆ. ಚೆನ್ನೈನ ಮುತ್ಯಾಲಪೇಟೆಯಲ್ಲಿ ಉತ್ತರ ಪ್ರದೇಶ ಮೂಲದ ಚಂದನ್ ಬಲಿಯಾಗಿದ್ದಾರೆ. ಎಟಿಎಂನಲ್ಲಿ ಹಣ ಡ್ರಾ ಮಾಡಲು ಹೋದಾಗ ವಿದ್ಯುತ್ ಸ್ಪರ್ಶಿಸಿ ಸಾವನ್ನಪ್ಪಿದ್ದಾರೆ.
ಆ ವಿಜಯನಗರದಲ್ಲಿ ಪೌರಕಾರ್ಮಿಕ ಮೃತಪಟ್ಟಿದ್ದಾರೆ. ವಿದ್ಯುತ್ ಕೇಬಲ್ ತಗುಲಿ ಪೌರಕಾರ್ಮಿಕ ಶಕ್ತಿವೇಲ್ ಸಾವನ್ನಪ್ಪಿದ್ದಾರೆ. ವ್ಯಾಸರಪಾಡಿಯಲ್ಲಿ ಗುತ್ತಿಗೆ ಕಾರ್ಮಿಕ ಜಗನ್ನಾಥನ್ ಮೃತಪಟ್ಟಿದ್ದಾರೆ. ಅವರು ಮೋಟರ್ ಪಂಪ್ ಆಪರೇಟ್ ಮಾಡುವಾಗ ಅವಘಡ ಸಂಭವಿಸಿದೆ. ವ್ಯಾಸರಪಾಡಿಯ ಗಣೇಶಪುರಂನಲ್ಲಿ ಘಟನೆ ನಡೆದಿದೆ.
ನಿರ್ಮಾಣ ಹಂತದ ಕಟ್ಟಡದಲ್ಲಿ ಫಲವೇಶ್ವರ್ ಎಂಬಾತ ಮೃತಪಟ್ಟಿದ್ದಾರೆ. ಮೃತರ ಕುಟುಂಬಕ್ಕೆ ಸಿಎಂ ಸ್ಟಾಲಿನ್ ತಲಾ 5 ಲಕ್ಷ ಪರಿಹಾರ ಘೋಷಿಸಿದ್ದಾರೆ.
ಚೆನ್ನೈ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ವಿಮಾನ ಹಾರಾಟ ರದ್ದುಗೊಳಿಸಲಾಗಿದೆ. ಮೇಲ್ಸೇತುವೆಗಳ ಮೇಲೆ ವಾಹನಗಳ ಪಾರ್ಕಿಂಗ್ ಮಾಡಲಾಗಿದೆ. ಹಲವು ಕಡೆಗಳಲ್ಲಿ ವಿದ್ಯುತ್ ಕಂಬಗಳು, ಮರಗಳು ಧರೆಗುರುಳಿವೆ. ರಸ್ತೆಗಳಲ್ಲಿ ಪ್ರಮಾಣದಲ್ಲಿ ನೀರು ಹರಿಯುತ್ತಿದ್ದು, ವಾಹನ ಸಂಚಾರಕ್ಕೆ ತೊಂದರೆಯಾಗಿದೆ.