alex Certify Weather Alert: ಮುಂದಿನ 36 ಗಂಟೆಗಳಲ್ಲಿ ಮತ್ತಷ್ಟು ತೀವ್ರಗೊಳ್ಳಲಿದೆ `ಬಿಪರ್ಜೋಯ್ ಚಂಡಮಾರುತ’ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

Weather Alert: ಮುಂದಿನ 36 ಗಂಟೆಗಳಲ್ಲಿ ಮತ್ತಷ್ಟು ತೀವ್ರಗೊಳ್ಳಲಿದೆ `ಬಿಪರ್ಜೋಯ್ ಚಂಡಮಾರುತ’

ನವದೆಹಲಿ: ಮುಂದಿನ 36 ಗಂಟೆಗಳಲ್ಲಿ ಬಿಪರ್ಜೋಯ್ ಚಂಡಮಾರುತವು(Cyclone Biparjoy) ತೀವ್ರಗೊಳ್ಳಲಿದ್ದು, ಮುಂದಿನ ಎರಡು ದಿನಗಳಲ್ಲಿ ಉತ್ತರ-ವಾಯುವ್ಯದತ್ತ ಸಾಗಲಿದೆ ಎಂದು ಭಾರತ ಹವಾಮಾನ ಇಲಾಖೆ (India Meteorological Department) ಮಾಹಿತಿ ನೀಡಿದೆ.

ಟ್ವೀಟರ್ ನಲ್ಲಿ ಮಾಹಿತಿ ನೀಡಿರುವ ಭಾರತೀಯ ಹವಾಮಾನ ಇಲಾಖೆ, ಜೂನ್ 8 ರಂದು ರಾತ್ರಿ 11:30 ಕ್ಕೆ ಗೋವಾದ ಪಶ್ಚಿಮ-ನೈಋತ್ಯಕ್ಕೆ 840 ಕಿಲೋಮೀಟರ್ ಮತ್ತು ಮುಂಬೈನ ಪಶ್ಚಿಮ-ನೈಋತ್ಯಕ್ಕೆ 870 ಕಿ.ಮೀ ದೂರದಲ್ಲಿರುವ ಪೂರ್ವ-ಮಧ್ಯ ಅರೇಬಿಯನ್ ಸಮುದ್ರದಲ್ಲಿ ಅತ್ಯಂತ ತೀವ್ರವಾದ ಚಂಡಮಾರುತ ಕಂಡುಬಂದಿದೆ.

ಪೂರ್ವ-ಮಧ್ಯ ಅರೇಬಿಯನ್ ಸಮುದ್ರದಲ್ಲಿ 2023 ರ ಜೂನ್ 08 ರ ಭಾರತೀಯ ಕಾಲಮಾನ 23.30 ಗಂಟೆಗೆ ಬಿಪರ್ಜೋಯ್ ಚಂಡಮಾರುತವು ಗೋವಾದ ಪಶ್ಚಿಮ-ನೈಋತ್ಯಕ್ಕೆ ಸುಮಾರು 840 ಕಿ.ಮೀ, ಮುಂಬೈನ ಪಶ್ಚಿಮ-ನೈಋತ್ಯಕ್ಕೆ 870 ಕಿ.ಮೀ ದೂರದಲ್ಲಿದೆ. ಇದು ಮುಂದಿನ 36 ಗಂಟೆಗಳಲ್ಲಿ ಮತ್ತಷ್ಟು ತೀವ್ರಗೊಳ್ಳುತ್ತದೆ ಮತ್ತು ಮುಂದಿನ 2 ದಿನಗಳಲ್ಲಿ ಬಹುತೇಕ ಉತ್ತರ-ವಾಯುವ್ಯದ ಕಡೆಗೆ ಚಲಿಸುತ್ತದೆ ಎಂದು ಅದು ಟ್ವೀಟ್ ಮಾಡಿದೆ.ಅರಬ್ಬಿ ಸಮುದ್ರದಲ್ಲಿ ಚಂಡಮಾರುತದ ಪರಿಣಾಮ ಕರಾವಳಿ ತೀರದ ಪ್ರದೇಶಗಳಿಗೆ ಹೋಗದಂತೆ ಹವಾಮಾನ ಇಲಾಖೆ ಮೀನುಗಾರರಿಗೆ ಸಲಹೆ ನೀಡಿತ್ತು. ಸಮುದ್ರದಲ್ಲಿದ್ದವರಿಗೆ ಕರಾವಳಿಗೆ ಮರಳಲು ಸೂಚಿಸಲಾಗಿದೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...