ಬೆಂಗಳೂರು: ಫಂಗಲ್ ಚಂಡಮಾರುತದ ಪರಿಣಾಮ ರಾಜ್ಯದ ಮೇಲೂ ಉಂಟಾಗಿದ್ದು, ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಕಂಡು ಬಂದಿದೆ. ಕೆಲವು ಜಿಲ್ಲೆಗಳಲ್ಲಿ ಮಳೆಯಾಗಿದೆ.
ಶೀತ ಗಾಳಿ ವಾತಾವರಣ ಹಿನ್ನೆಲೆಯಲ್ಲಿ ಕೋಲಾರ ಜಿಲ್ಲೆ, ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಶಾಲಾ, ಕಾಲೇಜುಗಳಿಗೆ ಸೋಮವಾರ ರಜೆ ನೀಡಲಾಗಿದೆ. ಚಂಡಮಾರುತ ಹಿನ್ನೆಲೆಯಲ್ಲಿ ಜಡಿ ಮಳೆ, ವಿಪರೀತ ಚಳಿ ಹಿನ್ನೆಲೆಯಲ್ಲಿ ಕೋಲಾರ ಜಿಲ್ಲೆಯ ಶಾಲಾ, ಕಾಲೇಜುಗಳಿಗೆ ಸೋಮವಾರ ರಜೆ ಘೋಷಿಸಿ ಜಿಲ್ಲಾಧಿಕಾರಿ ಆಕ್ರಮ ಪಾಷಾ ಆದೇಶ ಹೊರಡಿಸಿದ್ದಾರೆ. ಸೋಮವಾರದ ರಜೆಯನ್ನು ಮತ್ತೊಂದು ರಜಾ ದಿನದಲ್ಲಿ ತರಗತಿ ನಡೆಸಿ ಸರಿದೂಗಿಸುವಂತೆ ಸೂಚಿಸಿದ್ದಾರೆ.
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಶಾಲಾ, ಕಾಲೇಜುಗಳಿಗೆ ರಜೆ ನೀಡಲಾಗಿದೆ. ಬೆಂಗಳೂರಿನಲ್ಲಿ ಎಂದಿನಂತೆ ಶಾಲಾ ಕಾಲೇಜುಗಳು ನಡೆಯಲಿವೆ. ರಜೆ ಇರುವುದಿಲ್ಲ, ಮಕ್ಕಳನ್ನು ಎಚ್ಚರಿಕೆಯಿಂದ ಶಾಲೆಗೆ ಕಳುಹಿಸುವಂತೆ ಜಿಲ್ಲಾಧಿಕಾರಿ ಜಗದೀಶ್ ತಿಳಿಸಿದ್ದಾರೆ.