ಮುಂಬೈ: ದೇಶದಲ್ಲಿ ಕೊರೋನಾ ಆತಂಕದಲ್ಲೇ ಚಂಡಮಾರುತ ಭೀತಿ ಎದುರಾಗಿದೆ. ಪಶ್ಚಿಮ ಕರಾವಳಿಯಲ್ಲಿ ತೌಕ್ತೆ ಚಂಡಮಾರುತ ಆತಂಕ ಸೃಷ್ಟಿಯಾಗಿದೆ.
ಅರಬ್ಬಿಸಮುದ್ರದ ವಾಯುವ್ಯ ಭಾಗದಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಪರಿಣಾಮ ಚಂಡಮಾರುತ ಸೃಷ್ಟಿಯಾಗಲಿದೆ. ಮೇ 16 ರಂದು ಮಹಾರಾಷ್ಟ್ರ, ಗೋವಾ ಕರಾವಳಿಗೆ ಅಪ್ಪಳಿಸುವ ಸಾಧ್ಯತೆ ಇದೆ. ಭಾರತೀಯ ಹವಾಮಾನ ಇಲಾಖೆ ಈ ಕುರಿತಾಗಿ ಮುನ್ಸೂಚನೆ ನೀಡಿದೆ.
ವಾಯುಭಾರ ಕುಸಿತ ಪರಿಣಾಮ ರಾಜ್ಯದ ಕರಾವಳಿ ಪ್ರದೇಶದಲ್ಲಿಯೂ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಉತ್ತರಕನ್ನಡ, ದಕ್ಷಿಣಕನ್ನಡ, ಉಡುಪಿ ಜಿಲ್ಲೆಗಳ ವ್ಯಾಪ್ತಿಯಲ್ಲಿ ಮೇ 12, 13, 15 ರಂದು ಭಾರಿ ಮಳೆಯಾಗುವ ಕಾರಣ ಎಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಮೇ 16 ರಂದು ರಾಜ್ಯದ ಮಲೆನಾಡು ಮತ್ತು ಕರಾವಳಿ ಭಾಗದಲ್ಲಿ ಅತಿ ಹೆಚ್ಚು ಮಳೆಯಾಗುವ ಕಾರಣ ಆರೆಂಜ್ ಅಲರ್ಟ್ ನೀಡಲಾಗಿದೆ. ಇದೇ ವೇಳೆ ಉತ್ತರ ಮತ್ತು ದಕ್ಷಿಣ ಒಳನಾಡಿನ ಕೆಲವು ಭಾಗದಲ್ಲಿ ಸಾಧಾರಣ ಮಳೆಯಾಗಲಿದೆ. ಮೀನುಗಾರಿಕೆಗೆ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಸೂಚನೆ ನೀಡಲಾಗಿದೆ.